ಸುರೇಶ ನಾಯಕಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮನವಿ

ದೇವದುರ್ಗ,ಆ.೨೮- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಹಾಗೂ ಟ್ಟಣದ ಪ್ರಸಿದ್ಧ ಹಜರತ ಜೈಹಿರುದ್ದೀನ್ ಪಾಷಾ ರೆ.ಅ.ತಾತ ರಾಜ್ ಮೊಹಮ್ಮದ್ ಅವರ ನೇತೃತ್ವದಲ್ಲಿ ಭೇಟಿ ನೀಡಿ ಕಾಂಗ್ರೆಸ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಮುಖಂಡ ಟಿ. ಸುರೇಶ ನಾಯಕ ಗೌರಂಪೆಟ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ತಾಲೂಕಿನ ಸರ್ವಾಂಗಣ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಇವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸಕರತ್ಮಕವಾಗಿ ಸ್ಪಂದಿಸಿ ಮುಂದಿನ ದಿನಗಳಲ್ಲಿ ನಿಗಮ ಮಂಡಳಿ ರಚನೆ ಸಂದರ್ಭದಲ್ಲಿ ದೇವದುರ್ಗ ತಾಲೂಕಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಎಂದು ಟಿ.ಸುರೇಶ ನಾಯಕ ಸಂಜೆವಾಣಿ ಪತ್ರಿಕೆಯೊಂದಿಗೆ ಮಾತನಾಡುತ್ತ ಸೋಮವಾರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುರೇಶ ನಾಯಕ ಸೇರಿದಂತೆ ಇತರರು ಇದ್ದರು.