ಸುಲಿಗೆಕೋರನ ಬಂಧನ: ಬಂಗಾರದ ಲಾಕೇಟ್, ಮೊಬೈಲ್ ವಶ

ಕಲಬುರಗಿ,ಫೆ.2-ಸುಲಿಗೆಕೋರನೊಬ್ಬನನ್ನು ಬಂಧಿಸಿರುವ ಬ್ರಹ್ಮಪುರ ಪೊಲೀಸರು 25000 ರೂ.ಮೌಲ್ಯದ 6 ಗ್ರಾಂ.ಬಂಗಾರದ ಲಾಕೇಟ್ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಯಡ್ರಾಮಿ ತಾಲ್ಲೂಕಿನ ಬಳಬಟ್ಟಿ ತಾಂಡಾದ ಅಜಯ್ ಮಾನು ರಾಠೋಡ್ ಎಂಬಾತನನ್ನೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ಅಜಯ್ ಮಾನು ರಾಠೋಡ್ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹೆಣ್ಣು ಮಗಳೊಬ್ಬಳಿಂದ 25000 ರೂ.ಮೌಲ್ಯದ 6 ಗ್ರಾಂ.ಬಂಗಾರದ ಲಾಕೇಟ್ ಕಸಿದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಉಪ ಪೊಲೀಸ್ ಆಯುಕ್ತರಾದ ಕನಿಕಾ ಸಿಕ್ರಿವಾಲ್, ಎ.ಚಂದ್ರಪ್ಪ, ದಕ್ಷಿಣ ಉಪ ವಿಭಾಗದ ಎಸಿಪಿ ಭೂತೇಗೌಡ ವಿ.ಎಸ್. ಅವರ ಮಾರ್ಗದರ್ಶನದಲ್ಲಿ ಬ್ರಹ್ಮಪುರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಸೋಮಲಿಂಗ ಕಿರದಳ್ಳಿ ಅವರ ನೇತೃತ್ವದಲ್ಲಿ ಪಿಎಸ್‍ಐ ಸುಭಾಶ್ಚಂದ್ರ, ಸಿಬ್ಬಂದಿಗಳಾದ ಶಿವಪ್ರಕಾಶ, ಕೇಸುರಾಯ, ವಿಶ್ವನಾಥ, ಅಶೋಕ, ರಾಮು ಪವಾರ ಮತ್ತು ನವೀನ್ ಕುಮಾರ್ ಅವರನ್ನೊಳಗೊಂಡ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.