ಸುಳ್ಯದಲ್ಲಿ ಡಾ.ಬಾಬು ಜಗಜೀವನ್ ರಾಂರವರ ೧೧೪ನೇ ಜನ್ಮದಿನಾಚರಣೆ

ಸುಳ್ಯ, ಎ.೬- ಅನ್ಯಾಯ, ಅಸಮಾಧಾನ ನಡುವೆ ದೇಶದಲ್ಲಿ ದಲಿತ ಸಮುದಾಯವನ್ನು ತಲೆ ಎತ್ತಿ ನಿಲ್ಲಿಸಿ ಕೊಡುಗೆ ನೀಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಮ್ ಎಂದು ಸುಳ್ಯ ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಹೇಳಿದರು.
ನಾಡಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯ ನ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಡಾ.ಬಾಬು ಜಗಜೀವನ್ ರಾಮ್ ರವರ ೧೧೪ ನೇ ಜನ್ಮ ದಿನಾಚರನೆಯನ್ನು ಉದ್ಘಾಟಿಸಿ ಮಾತನಾಡಿದರು. ದಲಿತ ಸಮುದಾಯ ಬಲಿಷ್ಠ ಆಗಬೇಕು ಎಂದು ಹೇಳುವ ಬದಲು ಕೃತಿಯಲ್ಲಿ ತೋರಿಸುವ ಕೆಲಸ ಆಗಬೇಕು. ಬಾಬು ಜಗಜೀವನ್ ರಾಮ್ ಅವರಿಗೆ ಪ್ರಧಾನಿ ಆಗುವ ಅರ್ಹತೆಗಳಿದ್ದರೂ ಸಾಧ್ಯವಾಗಿಲ್ಲ ಎಂದು ಹೇಳಿದರು
ತಹಸೀಲ್ದಾರ್ ಅನಿತಾಲಕ್ಷ್ಮೀ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಉಪನ್ಯಾಸ ನೀಡಿದರು. ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನ.ಪಂ.ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ದ ನಾಯ್ಕ್ ವೇದಿಕೆಯಲ್ಲಿದ್ದರು. .
ಗಿರಿಜಾ ಪ್ರಾರ್ಥಿಸಿದರು, ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ ಪೇರಾಲು ಸ್ವಾಗತಿಸಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ್ ರೈ ವಂದಿಸಿದರು. ಶಿಕ್ಷಣ ಸಂಯೋಜಕ ವಸಂತ ಏನೆಕಲ್ಲು ನಿರೂಪಿಸಿದರು.