ಸುಳ್ಯದ ಸಾಮಾಜಿಕ ವಲಯಾರಣ್ಯಾಧಿಕಾರಿ ಗಣೇಶ್ ತಂತ್ರಿಯವರಿಗೆ ಉತ್ತಮ ಸಾಧನಾ ಪ್ರಶಸ್ತಿ

ಸುಳ್ಯ, ನ.೧೫-ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉತ್ತಮ ಸಾಧನೆಗೈದವರಿಗೆ ಜಿಲ್ಲಾಮಟ್ಟದಲ್ಲಿ ಕೊಡಮಾಡುವ ಉತ್ತಮ ಸಾಧನಾ ಪ್ರಶಸ್ತಿಗೆ ಸುಳ್ಯದ ಸಾಮಾಜಿಕ ವಲಯಾರಣ್ಯಾಧಿಕಾರಿ ಗಣೇಶ್ ತಂತ್ರಿಯವರು ಭಾಜನರಾಗಿದ್ದಾರೆ.

ಮೂಡಬಿದಿರೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಗಣೇಶ್ ತಂತ್ರಿಯವರು ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿಯವರಿಂದ ಪ್ರಶಸ್ತಿ ಸ್ವೀಕರಿಸಿದರು. ಉದ್ಯೋಗ ಖಾತರಿ ಯೋಜನೆಯಲ್ಲಿ ಇಲಾಖೆಯಲ್ಲಿ ನೆಡುತೋಪು ರಚನೆ, ವನ ನಿರ್ಮಾಣ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿದ ಇವರಿಗೆ ಈ ಪ್ರಶಸ್ತಿ ಲಭಿಸಿದೆ.