ಸುಳ್ಯ ನ.ಪಂ ಅಧ್ಯಕ್ಷ ಉಪಾಧ್ಯಕ್ಷರುಗಳ ಅಧಿಕಾರ ಸ್ವೀಕಾರ

ಸುಳ್ಯ,ನ.೧೦- ಚುನಾವಣೆ ಕಳೆದು ಒಂದೂವರೆ ವರ್ಷಗಳ ಬಳಿಕ ಸುಳ್ಯ ನಗರ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರುಗಳ ಅಧಿಕಾರ ಸ್ವೀಕಾರ ನಡೆಯಿತು. ಈಗಾಗಲೇ ಅವಿರೋಧವಾಗಿ ಆಯ್ಕೆಗೊಂಡಿರುವ ಅಧ್ಯಕ್ಷ ವಿನಯ್‌ಕುಮಾರ್ ಕಂದಡ್ಕ ಹಾಗೂ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕರವರು ಪಕ್ಷದ ಮುಖಂಡರು ಹಾಗೂ ನಗರ ಪಂಚಾಯಿತಿಯ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಬಿಜೆಪಿ ಪಕ್ಷದ ಹಿರಿಯ ಮುಖಂಡ ಪಿ.ಕೆ ಉಮೇಶ್, ತಾ.ಪಂ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸುಳ್ಯ ವರ್ತಕ ಸಂಘದ ಅಧ್ಯಕ್ಷ ಸುಧಾಕರ ರೈ, ಕಾರ್ಯದರ್ಶಿ, ಧೀರಾ ಕ್ರಾಸ್ತಾ, ವಿಪಕ್ಷ ನಾಯಕ ಬಾಲಕೃಷ್ಣ ಭಟ್ ಕೊಡೆಂಕೇರಿ, ನ.ಪಂ ಸದಸ್ಯ ರಿಯಾಝ್ ಕಟ್ಟೆಕ್ಕಾರ್, ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಪಕ್ಷದ ಹಿರಿಯರಾದ ಸುಭೋದ್ ಶೆಟ್ಟಿ ಮೇನಾಲ, ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡು ಪನ್ನೆ, ಪಕ್ಷದ ಇನ್ನಿತರ ಮುಖಂಡರುಗಳು ಕಾರ್ಯಕರ್ತರು, ನ.ಪಂ ಸದಸ್ಯರುಗಳು ಉಪಸ್ಥಿತರಿದ್ದರು.