ಸುಳ್ಯ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ: ಸುಳ್ಯ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೬೫ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಸುಳ್ಯ ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದ ಟ್ರಸ್ಟ್ ಕಚೇರಿ ಆವರಣದಲ್ಲಿ ನಡೆಯಿತು. ಆತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಭಾಗವಹಿಸಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ಒಂದು ದಿನದ ಕಾರ್ಯಕ್ರಮ ವಾಗಿರದೆ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಸಲು ಪ್ರತಿದಿನ ಕನ್ನಡಿಗರಾದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಕನ್ನಡ ಮಾಧ್ಯಮ ಶಾಲೆಗಳು ಮುಚ್ಚದಂತೆ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಅಗತ್ಯ ಎಂದು ಹೇಳಿದರು.
ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯಧ್ಯಕ್ಷ ಸಂಶುದ್ದೀನ್ ಎಸ್ ಹಾಗೂ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್, ಡೇವಿಡ್ ಧೀರಾ ಕ್ರಾಸ್ತಾ, ಮಾಜಿ ನಗರ ಪಂಚಾಯತ್ ಸದಸ್ಯ ಕೆಎಂ ಮುಸ್ತಫ, ಉದ್ಯಮಿಗಳಾದ ಗೋಪಾಲಕೃಷ್ಣ ಕರೋಡಿ, ಶಾಫಿ ಕುತ್ತ ಮೊಟ್ಟೆ, ಟ್ರಸ್ಟ್ ನ ಉಪಾಧ್ಯಕ್ಷ ಶಶಿಧರ ಎಂ ಜೆ, ನಂದರಾಜ್ ಸಂಕೇಶ್, ಸುಧೀರ್ ರೈ ಮೇನಾಲ, ರಾಧಾಕೃಷ್ಣ ಪರಿವಾರಕಾನ, ಅಬ್ದುಲ್ ರಜಾಕ್, ಭವಾನಿ ಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ಧೆ, ಜಯರಾಮ ಶೆಟ್ಟಿ ಕೆ ಎನ್, ಹರಿಶ್ಚಂದ್ರ ಪಂಡಿತ್, ಮಧುಸೂಧನ ಬೂಡು, ಪ್ರವೀಣ್ ಕುಮಾರ್, ಸುದೀಪ್ ರೈ ಮೇನಾಲ, ಬುದ್ಧ ಸಂಕೇಶ ಉಪಸ್ಥಿತರಿದ್ದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಕಾರ್ಯಕ್ರಮ ನಿರ್ವಹಿಸಿದರು.
ಟ್ರಸ್ಟ್‌ನ ಖಜಾಂಜಿ ಗೋಕುಲ್ ದಾಸ್ ವಂದಿಸಿದರು.