ಸುಳ್ವಾಡಿ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ

ಸಂಜೆವಾಣಿ ವಾರ್ತೆ
ಹನೂರು: ಆ.16:- ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಅವರು ಭೇಟಿ ನೀಡಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಿಗುವ ಆರೋಗ್ಯ ಸೌಲಭ್ಯಗಳು ಹಾಗೂ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡರು.
ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ, ರೋಗಿಗಳನ್ನು ಮಾತನಾಡಿಸಿ ಸ್ಟಾಪ್ ನರ್ಸ್ ಬಳಿ ಮಾಹಿತಿ ಪಡೆದರು. ವೈದ್ಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬೆಳಿಗ್ಗೆ ಆರೋಗ್ಯ ಕೇಂದ್ರ ಸಿಬ್ಬಂದಿಗಳ ವಿವರ ಹಾಗೂ ಸರ್ಕಾರದಿಂದ ಔಷದಿ ನೀಡುವ ವಿವರವನ್ನು ನೀಡುವಂತೆ ತಿಳಿಸಿದರು.
ನಂತರ ಮಾರ್ಟಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಈ ಪಿಡಬ್ಲ್ಯೂಡಿ ಅಭಿವೃದ್ಧಿಯಡಿಯಲ್ಲಿ ನಡೆಯುತ್ತಿರುವ ಸುಮಾರು 4.40 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ 1800 ಮೀಟರ್ ವಿಸಿರ್ಣದ ರಸ್ತೆ ಹಾಗೂ ಒಳಚಂಡಿ ಕಾಮಗಾರಿಯನ್ನು ಶಾಸಕ ಮಂಜುನಾಥ್ ಅವರು ಪರಿಶೀಲಿಸಿದರು.
ನಡೆಯುತ್ತಿರುವ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳು ಯಾವುದೇ ಲೋಪದೋಷವಿಲ್ಲದೆ ಗ್ರಾಮಸ್ಥರ ಸಹಕಾರ ಪಡೆದು ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಅಧಿಕಾರಿಗಳು ಕ್ರಮ ವಹಿಸಬೇಕು ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಂಜಿನಿಯರ್ ಚಿನ್ನಣ್ಣ ಮತ್ತು ಮಹೇಶ್, ಸೇರಿದಂತೆ ಗ್ರಾಮದ ಸ್ಥಳೀಯರು ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಜರಿದ್ದರು.