ಸುವ್ಯವಸ್ಥಿತವಾಗಿ ಯಾವುದೇ ಲೋಪ ಉಂಟಾಗದಂತೆ ಚುನಾವಣೆ ನಡೆಸುವಂತೆ ಸೂಚನೆ

ಮೈಸೂರು, ಏ.27:- ಭಾರತ ಚುನಾವಣಾ ಆಯೋಗದಿಂದ ಕೆಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ವೀಕ್ಷಕರಾಗಿ ನೇಮಕವಾಗಿರುವ ಯಶು ರುಸ್ತುಂ ರೊಂದಿಗೆ ಕೆ.ಆರ್. ನಗರ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಚುನಾವಣಾ ಕಾರ್ಯಗಳ ಬಗ್ಗೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಸಭೆ ನಡೆಸಿದರು.
ಸುವ್ಯವಸ್ಥಿತವಾಗಿ ಯಾವುದೇ ಲೋಪ ಉಂಟಾಗದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚುನಾವಣಾ ಕೆಲಸವನ್ನು ಮತ್ತೊಮ್ಮ ಪರಿಶೀಲಿಸಿಕೊಂಡು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ವೀಕ್ಷಕರಿಗೆ ವಿವರಿಸಿದರು. ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.
ಚುನಾವಣಾ ಆಯೋಗದಿಂದ ನೀಡಲಾಗಿರುವ ನಿರ್ದೇಶನದಂತೆ ಮತಗಟ್ಟೆಗಳಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ, ಟೇಬಲ್ ಇನ್ನಿತರ ವ್ಯವಸ್ಥೆಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಸೆಕ್ಟರ್ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ , ಕೆ.ಆರ್.ನಗರ ಚುನಾವಣಾಧಿಕಾರಿ ಸುಪ್ರಿಯಾ, ತಹಶೀಲ್ದಾರ್ ಸಂತೋಷï ಹಾಗೂ ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.