ಸೂರ್ಯ ಚಂದ್ರ ಇರುವವರೆಗೂ ಶ್ರೀ ಮಹರ್ಷಿ ವಾಲ್ಮೀಕಿ ಹೆಸರು ಅಜರಾಮರ: ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ,ಅ31: ಮಾನವ ಕುಲಕ್ಕೆ ರಾಮಾಯಣ ಮಹಾಕಾವ್ಯವನ್ನು ಕೊಡುಗೆ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿಯು ಸೂರ್ಯ, ಚಂದ್ರ ಇರುವವರೆಗೂ ಅಜರಾಮರವಾಗಿರುತ್ತದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.
ಅವರು ‌ಇಂದು ಶ್ರೀ‌ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಜಿಲ್ಲಾಡಳಿತದಿಂದ ನಗರದ ನಲ್ಲಚೆರವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಭವನದ ಮುಂಭಾಗದಲ್ಲಿರುವ ಶ್ರೀಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಮಿಸಿ ಮಾತನಾಡಿದರು.
ಮಹಾಕಾವ್ಯದ ಮೂಲಕ ಸ್ವಾಸ್ಥ್ಯ,ನ್ಯಾಯಯುತ ಹಾಗೂ ಸಮಾನ ಸಮಾಜದ ಪರಿಕಲ್ಪನೆಯನ್ನು ಮೂಡಿಸಿದ ಮಹಾಕವಿ ಮಹರ್ಷಿ ವಾಲ್ಮೀಕಿ ಅವರಾಗಿದ್ದಾರೆ, ಅವರ ಆದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರೋನಾ ಹಿನ್ನಲೆ ವಾಲ್ಮೀಕಿ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್. ನಂದಿನಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜಪ್ಪ,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಶುಭಾ,
ಮಹಾನಗರ ಪಾಲಿಕೆ ಪ್ರಭಾರ ಆಯುಕ್ತರಾದ ಈರಪ್ಪ ಬಿರಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ವಾಲ್ಮೀಕಿ ಸಮಾಜ ಮುಖಂಡರಾದ ಗಿರಿಮಲ್ಲಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಠೋಡ್, ವಾಲ್ಮೀಕಿ ನಾಯಕ ಮಹಾ ಸಭದ ಗೌರವ ಅಧ್ಯಕ್ಷರಾದ ಕಮಲಾಮರಿಸ್ವಾಮಿ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಸೇರಿದಂತೆ ಇತರರು ಇದ್ದರು.