ಸೆಂಟ್ರಲ್ ವಾರ್ಡ್ ನಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ವಿತರಣೆ

ಮಂಗಳೂರು, ಜೂ.೨- ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ತಾ ೧.೬.೨೦೨೧ರಂದು ನಗರದ ಸೆಂಟ್ರಲ್ ವಾರ್ಡಿನಲ್ಲಿ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿ ಇದ್ದವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ದಿನಸಿ ಸಾಮಗ್ರಿಗಳ ಕಿಟ್ ಗಳನ್ನು ಜಿಲ್ಲಾ ಕಾಂಗ್ರೆಸ್ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಹಾಗೂ ಮಾಜಿ ಶಾಸಕರಾದ ಜೆ. ಆರ್ ಲೋಬೊರವರು ವಿತರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಕೋವಿಡ್ ಸಂದಿಗ್ದ ಪರಿಸ್ಥಿತಿಯಲ್ಲಿ ಬಡ ಹಾಗೂ ಮಾಧ್ಯಮ ವರ್ಗದ ಜನರು ಬಹಳಷ್ಟು ತೊಂದರೆಯಲ್ಲಿದ್ದಾರೆ. ಲಾಕ್ ಡೌನ್ ನಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಜನರು ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವು ನೊಂದವರಿಗೆ ಸಹಾಯವನ್ನು ಬಯಸಲು ಪ್ರಯತ್ನಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ಟಿ. ಕೆ. ಸುಧೀರ್, ನೀರಜ್ ಚಂದ್ರ ಪಾಲ್, ಜಿಲ್ಲಾ ಸೇವಾದಳ ಕಾರ್ಯದರ್ಶಿ ಉದಯ್ ಕುಂದರ್, ಚೇತನ್ ಪೂಜಾರಿ ಕೃತಿನ್ ಕುಮಾರ್, ರೂಪಾ ಚೇತನ್, ಶಾನ್ ಡಿಸೋಜಾ, ಅಶೋಕ್, ಯಸ್ವಂತ್ ಪ್ರಭು, ರೋಷನ್, ಆಸ್ಟನ್ ಸಿಕ್ವೇರಾ, ಹನೀಫ್ ಎ. ಆರ್., ಜುನೈದ್, ವೆಂಕಟೇಶ್ ಕಾಮತ್, ರಾಜೇಶ್ ದೇವಾಡಿಗ, ಜಯರಾಮ್ ಪೈ, ಸೆಲ್ವಿ, ಶ್ರೀದೇವಿ

ಮೊದಲಾದವರು ಉಪಸ್ಥಿತರಿದ್ದರು.