ಸೆಟ್ಟೇರಿದ `ಜನ’

ವಿತರಕ ಬಿ.ಜಿ.ಚಂದನ್‍ಕುಮಾರ್ ಇದೀಗ “ಜನ” ಚಿತ್ರದ ಮೂಲಕ ನಿರ್ದೇಶಕನಾಗಿ ಪರಿಚಯವಾಗುತ್ತಿದ್ದಾರೆ.

ಚಿತ್ರದ ಮುಹೂರ್ತ ಸಮಾರಂಭ ದೇವಯ್ಯ ಪಾರ್ಕ್ ಬಳಿಯ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ. ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ದೇಶಕರ ತಂದೆ ಗೋವಿಂದರಾಜ್ ಕ್ಲಾಪ್ ಮಾಡಿದರೆ, ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಕ್ಯಾಮೆರಾ ಚಾಲನೆ ಮಾಡಿ ಶುಭ ಹಾರೈಸಿದರು.

ಜನ ಚಿತ್ರದ ಮೂಲಕ ಚೇತನ್‍ಕುಮಾರ್ ಯುವಪ್ರತಿಭೆ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇದೊಂದು ಜರ್ನಿಯಲ್ಲಿ ಸಾಗುವ ಕಥೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚಿತ್ರೀಕರಿಸುವ ಯೋಜನೆ ನಿರ್ದೇಶಕರಿಗಿದೆ. ಮಾಸ್, ಕ್ಲಾಸ್ ಹೀಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡಿಕೊಂಡಿರುವ ನಿರ್ದೇಶಕ ಚಂದನ್‍ಕುಮಾರ್ ಚಿತ್ರದಲ್ಲಿ ಅಂಡರ್‍ವಲ್ರ್ಡ್ ಶೇಡ್ ಕೂಡ ಇರುತ್ತೆ ಎಂದು ಹೇಳಿದ್ದಾರೆ.

ಯಶೋದಮ್ಮ ಗೋವಿಂದರಾಜ್ ಹಾಗೂ ದೀಪಾ ಚಂದನ್‍ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ನರಸಿಂಹಮೂರ್ತಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.  ಮುಂಜಾನೆ ಮಂಜು ಛಾಯಾಗ್ರಹಣ, ಕಾರ್ತೀಕ್ ಅಲೆ ಸಂಗೀತ ಸಂಯೋಜನೆ, ಚಾಲೆಂಜಿಂಗ್ ಸೂರಿ  ನೃತ್ಯನಿರ್ದೇಶನ ಚಿತ್ರಕ್ಕಿದೆ,