
ಮಹಿಳಾ ಪ್ರಧಾನ ಚಿತ್ರ ” ತಾರಿಣಿ” ಸೆಟ್ಟೇರಿದೆ. ನಟಿ ಮಮತಾ ರಾವುತ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ವಿಶೇಷ ಏನು ಅನ್ನುತ್ತೀರಾ ನಟಿ, ಮಮತಾ ರಾವ್ ಗರ್ಭಿಣಿಯಾಗಿದ್ದಾರೆ. ತೆರೆಯ ಮೇಲೆಯೂ ಗರ್ಭಿಣಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಾಜ್ಯ ಹಾಗು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿ ಪಡೆದಿರುವ ಸಿದ್ದು ಪೂರ್ಣಚಂದ್ರ “ತಾರಿಣಿ” ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸುರೇಶ್ ಕೊಟ್ಯಾನ್ ಚಿತ್ರಾಪು ನಿರ್ಮಿಸುತ್ತಿದ್ದಾರೆ.
ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ.
“ತಾರಿಣಿ” ಯಾಗಿ ಮಮತ ರಾಹುತ್ ನಟಿಸುತ್ತಿದ್ದು, ನಾಯಕನಾಗಿ ರೋಹಿತ್ ಅಭಿನಯಿಸುತ್ತಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಡಾ.ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ಕುಮಾರ ಬೇಂದ್ರೆ, ತೇಜಸ್ವಿನಿ, ರಾಜು ಕಲ್ಕುಣಿ, ಶ್ರೀಸಾಯಿ ಮಂಜು, ಸುಚಿತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
.ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ದೀಪಕ್ ಸಿ.ಎಸ್ ಸಂಕಲನ, ಬಸವರಾಜ್ ಆಚಾರ್ಯ ಕಲಾ ನಿರ್ದೇಶನ, ನಾಗರತ್ನ ಕೆ.ಹೆಚ್ ವಸ್ತ್ರಾಲಂಕಾರ ಹಾಗೂ ಎಸ್ ರಘುನಾಥ್ ರಾವ್ ಅವರ ಸ್ಥಿರಚಿತ್ರಣ ಈ ಚಿತ್ರಕ್ಕಿದೆ.