ಸೆಟ್ಟೇರಿದ ಭಗೀರಥ

“ ಭಗೀರಥ” ಚಿತ್ರ ಸೆಟ್ಟೇರಿದ ನಡುವೆ ಮೈಸೂರು ಸೇರಿದಂತೆ ಸುತ್ತಸುತ್ತಲ ಭಾಗದಲ್ಲಿ ಚಿತ್ರೀಕರಣ ಆರಂಭವಾಗಿದೆ. ಚಿತ್ರಕ್ಕೆ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ಬಂಡವಾಳ ಹಾಕುತ್ತಿದ್ದು ರಾಮ್ ಜನಾರ್ದನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕಳೆದವಾರ ಮುಹೂರ್ತದ ಬಳಿಕ ಮಾತಿಗಿಳಿದ ನಿರ್ದೇಶಕ ರಾಮ್ ಜನಾರ್ಧನ್,ಯಾವುದಾದರೂ ಕೆಲಸವನ್ನು ಬಿಡದೆ ಸಾಧಿಸುವುದನ್ನು “ಭಗೀರಥ” ಪ್ರಯತ್ನ ಎನ್ನುತ್ತಾರೆ. ಈ ಪದಕ್ಕೂ ನಮ್ಮ ಚಿತ್ರಕ್ಕೂ ಸಂಬಂಧವಿದೆ. ಚಿತ್ರದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿ ಕಾಳೆ, ಬಾಲ ರಾಜವಾಡಿ, ಸುರಭಿ ರವಿ, ನಯನ, ನಿಖಿತ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಅವರು ಮಠಾಧಿಪತಿಗಳ ಪಾತ್ರ ನಿರ್ವಹಿಸುತ್ತಿದ್ದಾರೆ ಎನ್ನುವ ಮಾಹಿತಿ ನೀಡಿದರು.

ನಾಯಕ ಜಯಪ್ರಕಾಶ್,ನಿರ್ದೇಶಕರು ಉತ್ತಮ ಕಥೆ ಮಾಡಿಕೊಂಡಿದ್ದಾರೆ ಎಂದರೆ ನಾಯಕಿ ಚಂದನ ರಾಘವೇದ್ರ ಪತ್ರಕರ್ತೆಯ ಪಾತ್ರ ಎಂದರು.

ಹಿರಿಯ ನಿರ್ದೇಶಕ ಸಾಯಿ ಪ್ರಕಾಶ್, ನಿರ್ದೇಶಕರು ಮಠಾಧಿಪತಿ ಪಾತ್ರವನ್ನು ನೀವೇ ಮಾಡಬೇಕೆಂದರು ಮಾಡುತ್ತಿದ್ದೇನೆ ಎಂದರೆ, ಚಿತ್ರದಲ್ಲಿ ನಟಿಸುತ್ತಿರುವ ನಯನ ಹಾಗೂ ಚೇತನ್ ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಭಾಷಣೆಕಾರ ಜೆ.ಎಂ.ಪ್ರಹ್ಲಾದ್, ಪ್ರದೀಪ್ ವರ್ಮಾ ಸಂಗೀತ, ಸೂರಿ ಚಿತ್ತೂರು ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸವಿದೆ.