ಸೆರಂನಿಂದ ಪೂರ್ಣ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆ

ಮುಂಬೈ,ಮೇ.೨- ಕೋವಿಶೀಲ್ಡ್ ಲಸಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಆರಂಭಿಸಲಾಗಿದೆ ಎಂದು ಪುಣೆಯ ಭಾರತೀಯ ಸೆರಂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲ ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಂಗ್ಲೆಂಡ್‌ನ ಆಸ್ಟ್ರಾಝೆನೆಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಪಾಲುದಾರರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
ಕೋವಿಶೀಲ್ಡ್ ಲಸಿಕೆಯ ಪಾಲುದಾರರೊಂದಿಗೆ ಫಲಫ್ರದ ಮಾತುಕತೆ ನಡೆದಿದದೆ.ಪುಣೆಯ ಔಷಧಿ ತಯಾರಿಕಾ ಸಂಸ್ಥೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಗೆ ಆಧ್ಯತೆ ನೀಡಿದ್ದು ಮುಂದಿನ ಕೆಲ ದಿನಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಶೀಲ್ಡ್ ಬೆಲೆಯನ್ನು ಪ್ರತಿ ದೋಸ್ ಗೆ ೪೦೦ ರೂಪಾಯಿಂದ ೩೦೦ ರೂಪಾಯಿಗೆ ಇಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಗಳಿಗೆ ಹಣ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ
ವೈ ಭದ್ರೆತ:
ಈ ನಡುವೆ ವಿಶ್ವದ ಅತಿ ದೊಡ್ಡ ಔಷಧ ತಯಾರಿಕಾ ಕಂಪನಿಯ ಮುಖ್ಯಸ್ಥ ಆಧಾರ್ ಪೂನಾವಾಲಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಐ ಭದ್ರತೆ ಒದಗಿಸಿದೆ.
ಇದಕ್ಕೂ ಮುನ್ನ ಆಧಾರ್ ಪೂನಾವಾಲ ಅವರು ಲಸಿಕೆ ಉತ್ಪಾದನೆಗೆ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿದ್ದರು.