ಸೆರ್ಬಿಯಾ ಶಾಲೆಯಲ್ಲಿ ಗುಂಡಿನ ದಾಳಿ: 8 ವಿದ್ಯಾರ್ಥಿಗಳು ಸಾವು: ಆರೋಪಿ ಬಾಲಕ ಸೆರೆ

ನವದೆಹಲಿ,ಮೇ.3- ಸರ್ಬಿಯಾದ ಬೆಲ್‌ಗ್ರೇಡ್‌ನಲ್ಲಿರುವ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ

ಬೆಳಗಿನ ಜಾವ ನಡೆದ ದಾಳಿಗೆ ಸಂಬಂಧಿಸಿದಂತೆ ತಂದೆಯ ಗನ್ ಹಿಡಿದುಕೊಂಡಿದ್ದ 14 ವರ್ಷದ ವಿದ್ಯಾರ್ಥಿ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಂದೆಯಿಂದ ಗನ್ ತಂದಿದ್ದ 14 ವರ್ಷದ ಬಾಲಕ ಶಾಲೆಯಲ್ಲಿ ಏಕಾ ಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಈ ಸಂಬಂದ ತನಿಖೆ ನಡೆಯುತ್ತಿದ್ದು ಬಾಲಕ ಯಾವ ಕಾರಣಕ್ಕೆ ಗುಂಡಿನ ದಾಳಿ ನಡೆಸಿದ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಘಟನೆ ಕಾರಣ ತಿಳಿಯಲಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಘಟನೆ ಸಂಬಂದ ಹತ್ಯೆಯಾದ ವಿದ್ಯಾರ್ಥಗಳ ಪೋಷಕರ ಆಕ್ರಂದನ ಮುಗಿಲು ಮುಟ್ಡಿದೆ . ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ವಿದ್ಯಾರ್ಥಿಗೆ ಮತ್ತು ಘಟನೆ ಹಿಂದಿರುವ ಶಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ಸಾರೆ.