ಸೆ.೧೨ ರಿಂದ ೨೯ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ – ಸಿಇಓ

ರಾಯಚೂರು,ಆ.೨- ಕುಷ್ಠರೋಗ ನಿರ್ಮೂಲನೆ ನಿಟ್ಟಿನಲ್ಲಿ ಸೆಪ್ಟೆಂಬರ್ ೧೨ ರಿಂದ ೨೯ ರವರೆಗೆ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಎಲ್.ಸಿ.ಡಿ.ಸಿ ಸಮನ್ವಯ ಸಮಿತಿ ಅಧ್ಯಕ್ಷ ನೂರ್ ಜಹಾನ್ ಖಾನಂ ಹೇಳಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ನ ಜಲ ನಿರ್ಮಲ ಸಭಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕುಷ್ಠರೋಗ ಪತ್ತೆ ಅಚ್ಚುವ ಆಂದೋಲನಾ ಚತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು,
ಕುಷ್ಠರೋಗ ಪ್ರಕರಣ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಬೇಕು.ಆಂದೋಲನದ ಯಶಸ್ಸಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಗಳು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಡಿ. ಎಚ್. ಓ ಡಾ.ಸುರೆಂದ್ರಬಾಬು, ಡಾ.ನಂದಿತಾ,
ಜಿಲ್ಲಾಕುಷ್ಠರೋಗ ನಿಯಂತ್ರಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.