ಸೆ.೧೬ ಕ್ಕೆ ವಸತಿ ಶಾಲೆಗಳ ಪ್ರವೇಶಕ್ಕೆ ಪರೀಕ್ಷೆ

ಜಗಳೂರು.ಸೆ.೬; ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,  ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲೆಯ  ಮೊರಾರ್ಜಿ ದೇಸಾಯಿ,ಕಿತ್ತೂರು ರಾಣಿ ಚೆನ್ನಮ್ಮ,ಏಕಲವ್ಯ,ಸಂಗೊಳ್ಳಿ ರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್,ಶ್ರೀಮತಿ ಇಂದಿರಾಗಾಂಧಿ,ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2021-22 ನೇ ಸಾಲಿಗೆ 6ನೇ ತರಗತಿ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪರೀಕ್ಷೆ ನಡೆಸಲಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದ್ದು ಈ ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನ ಪೋಷಕರು,ಮುಖ್ಯೋಪಾಧ್ಯಾಯರು ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಸಂಬಂಧಿಸಿದ ಶಾಲೆಯನ್ನು ಸಂಪರ್ಕಿಸಿ ಪಡೆಯ ಬಹುದಾಗಿದೆ.ಸೆ.೧೬ ರಂದು ಪರೀಕ್ಷೆ ಜರುಗಲಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.