ಸೆ.೧೭: ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ – ಕೆ.ರಾಮು

ರಾಯಚೂರು,ಸೆ.೧೪- ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ನಗರಸಭೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆಪ್ಟೆಂಬರ್ ೧೭ ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ರಾಯಚೂರು ಜಿಲ್ಲಾ ವಿಶ್ವಕರ್ಮ ಸಮಾಜದ ಪ್ರದಾನ ಕಾರ್ಯದರ್ಶಿ ಕೆ ರಾಮು ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಅಂದು ಬೆಳಿಗ್ಗೆ ೮-೩೦ ಕ್ಕೆ ರಾಯಚೂರಿನ ರೇಡಿಯೋ ಸ್ಟೇಶನ್ ಎದುರುಗಡೆ ಇರುವ ಭಗವಾನ್ ಶ್ರೀ ವಿಶ್ವಕರ್ಮ ವೃತ್ತಕ್ಕೆ ಗಣ್ಯರಿಂದ ಪೂಜಾ ಕಾರ್ಯಕ್ರಮ ಜರುಗಲಿದೆ.೯.೩೦ ಕ್ಕೆ ನಗರದ ನೇತಾಜಿ ವೃತ್ತದಿಂದ ತೀನ್ ಕಂದಿಲ್ ಮಾರ್ಗವಾಗಿ ಡಾ. ಬಿ.ಆರ್.ಅಂಬೇಡ್ಕರ್ ವೃತ್ತ ದಿಂದ ರಂಗಮಂದಿರಕ್ಕೆ ವಿಶ್ವಕರ್ಮ ಭಾವಚಿತ್ರ ಮೆರವಣಿಗೆ ನಡೆಯಲಿದೆ ಎಂದರು.
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಶೇಕಡ ೯೦ ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಸಚಿವರು ಹಾಗೂ ಶಾಸಕರು ಸ್ಥಳೀಯ ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬ್ರಹ್ಮ ಗಣೇಶ್, ಡಾ.ವೆಂಕಟೇಶ್,ಎಸ್ ರವೀಂದ್ರ ಸೇರಿದಂತೆ ಇತರರು ಇದ್ದರು.