ಸೆ.೨೪ ಉಚಿತ ಆರೋಗ್ಯ ತಪಾಸಣಾ ಶಿಬಿರ – ವೀರುಪಕ್ಷಗೌಡ

ರಾಯಚೂರು, ಸೆ.೨೨- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರೋಟರಿ ಕ್ಲಬ್ ,ವೈದೇಹಿ ಆಸ್ಪತ್ರೆ ಬೆಂಗಳೂರು ವತಿಯಿಂದ ಎ. ಪಿ.ಎಂ.ಸಿ ಮಾಜಿ ಅಧ್ಯಕ್ಷ ದಿ. ಬಸವರಾಜಪ್ಪಗೌಡ ಆಶಾಪೂರ ಅವರ ೭೫ ನೇ ಜನ್ಮದಿನದ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೆಪ್ಟೆಂಬರ್ ೨೪ ರಂದು ಹಮ್ಮಿಕೊಳ್ಳಲಾಗಿದೆ ಎಂದು ವೀರುಪಕ್ಷಗೌಡ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ನಗರದ ಆಶಾಪುರ ಶ್ರೀ ಬಸವ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಉಡಮಗಲ್ ಖಾನಾಪುರ ವೀರ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಟಮಾರಿ ಗಬ್ಬೂರು ಸಂಸ್ಥಾನ ಮಠದ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸದ ರಾಜಾ ಅಮರೇಶ್ವರ ನಾಯಕ್, ನಗರ ಶಾಸಕ ಡಾ. ಶಿವರಾಜ ಪಟೇಲ್, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ತಿಪ್ಪರಾಜ್ ಹವಾಲ್ದಾರ್, ರೆಡ್ ಕ್ರಾಸ್ ಅಧ್ಯಕ್ಷ ವಿಜಯ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಮೋದ್ ಕುಮಾರ,ಶರಣಬಸವ ಇದ್ದರು.