ಸೆ.೨೯ ಕ್ಕೆ ಅಖಿಲ ಭಾರತ ವಿಶ್ವಕರ್ಮ ಪರಿಷತ್ ಉದ್ಘಾಟನೆ

ದಾವಣಗೆರೆ.ಸೆ.೨೫; ನಗರದ  ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ‘ ಸೆ.೨೯ ರಂದು ಬೆಳಗ್ಗೆ ೧೦ ಕ್ಕೆ
ವಿಶ್ವಕರ್ಮ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ” ಅಖಿಲ ಭಾರತ ವಿಶ್ವಕರ್ಮ ಪರಿಷತ್ ” ಉದ್ಘಾಟನೆ ಮಾಡಲಾಗುವುದು ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್  ರಾಷ್ಟ್ರೀಯ ಅಧ್ಯಕ್ಷ ಹೆಚ್.ವಿ ಸತೀಶ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಸನ ಜಿಲ್ಲೆಯ ಅರಕಲಗೂಡಿನ ಅರೆಮಾದನಹಳ್ಳಿಯ ವಿಶ್ವಕರ್ಮ ಮಹಾಸಂಸ್ಥಾನದ ಶ್ರೀ ಶಿವ ಸುಜ್ಞಾನತೀರ್ಥ ಮಹಾಸ್ವಾಮಿ,   ಶ್ರೀ ಶಿವಾತ್ಯಾನಂದ ಸರಸ್ವತಿ ಮಹಾಸ್ವಾಮಿಜಿ,  ಅಷ್ಟೋತ್ತರ ಶತಶ್ರೀ ಶಂಕರಾನಂದ ಸರಸ್ವತಿ ಮಹಾಸ್ವಾಮಿಜಿ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದ  ಅಧ್ಯಕ್ಷತೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.  ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ    ಸಲೀಮ್ ಅಹಮದ್ ಅವರುಗಳು ಜ್ಯೋತಿ ಬೆಳಗುವ ಮೂಲಕ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ
ಎಸ್.ಎಸ್ . ಮಲ್ಲಿಕಾರ್ಜುನ್,ರಘು ಆಚಾರ್, ಬಿ . ನಾಗೇಂದ್ರಚಾರ್ ,  ಎಂ.ಡಿ. ಲಕ್ಷ್ಮೀನಾರಾಯಣ್,   ಹೆಚ್.ಪಿ. ಮಂಜಪ್ಪ ಮತ್ತಿತರರು ಆಗಮಿಸಲಿದ್ದಾರೆ ಎಂದರು.