ಸೆ. ೯ ರಂದು ರಾಷ್ಟ್ರೀಯ ಲೋಕ್ ಅದಾಲತ್?

ತುಮಕೂರು, ಆ. ೯- ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಾದ್ಯಂತ ಸೆ. ೯ ರಂದು ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ. ಅವರು ತಿಳಿಸಿದರು.
ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಲೋಕ್ ಅದಾಲತ್ ಪ್ರಯುಕ್ತ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. ೯ ರಂದು ನಡೆಯುವ ಲೋಕ್ ಆದಾಲತ್ ಮೂಲಕ ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು. ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರು ಪಾವತಿಸಲಾಗುವುದು. ಶೀಘ್ರ ನ್ಯಾಯ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ ಎಂದರು.
ರಾಜಿಗಾಗಿ ಗುರುತಿಸಲಾದ ಪ್ರಕರಣಗಳು
ಸಿವಿಲ್ ಪ್ರಕರಣಗಳಾದ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರ್ ಕಾಯ್ದೆ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಹಣಕಾಸಿನ ವ್ಯಾಜ್ಯಗಳು, ಹಾಗೂ ಎರಡು ವರ್ಷಕ್ಕಿಂತ ಕಡಿಮೆ ಶಿಕ್ಷೆಯುಳ್ಳ ಪ್ರಕರಣ, ರಾಜಿಯಾಗಬಲ್ಲ ಎಲ್ಲಾ ಕ್ರಿಮಿನಲ್ ಪ್ರಕರಣ, ದೌರ್ಜನ್ಯ ತಡೆ ಪ್ರಕರಣ, ಜೀವನಾಂಶ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣವನ್ನು ಸೇರಿದಂತೆ ಹಲವಾರು ಪ್ರಕರಣಗಳನ್ನು, ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಮೇಲ್ ವಿಳಾಸ: ಜಟsಚಿಣumಞuಡಿ೧@gmಚಿiಟ.ಛಿomನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಚೇರಿ ದೂರವಾಣಿ ಸಂಖ್ಯೆ: ೦೮೧೬-೨೨೫೫೧೩೩ ಮತ್ತು ಮೊ.ಸಂ. ೯೧೪೧೧೯೩೯೫೯, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:೧೮೦೦-೪೨೫-೯೦೯೦೦ಯನ್ನು ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನೀಸ ಉಪಸ್ಥಿತರಿದ್ದರು.