ಸೆ. 1 ರಿಂದ ಎಐಡಿಎಸ್‍ಒ ರಾಜ್ಯ ಸಮ್ಮೇಳನ

ಯಾದಗಿರಿ,ಆ 25: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 1,2 ಮತ್ತು 3 ರಂದು ತುಮಕೂರಿನಲ್ಲಿ ಎಐಡಿಎಸ್‍ಒ ಮೂರು ದಿನಗಳ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನವನ್ನು ಆಯೋಜಿಸಿದೆ.
ಸಮ್ಮೇಳನವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಎಐಡಿಎಸ್‍ಒ ಸಂಘಟನೆಗೆ ಸೇರಿದ ಎಲ್ಲ ವಿದ್ಯಾರ್ಥಿಗಳ ಮೇಲಿದೆ ಎಂದು ಜಿಲ್ಲಾ ಸಂಚಾಲಕಿ ಶಿಲ್ಪಾ ಬಿಕೆ ತಿಳಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಬೇಕು. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು.ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣವನ್ನು ರಕ್ಷಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಸಮ್ಮೇಳನ ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.