ಸೆ.13 ರಂದು ವಿಶ್ವಕ್ರಾಂತಿ ದಿವ್ಯಪೀಠದಿಂದ ಭಾಷಣ ಸ್ಪರ್ಧೆ

????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಭಾಲ್ಕಿ:ಸೆ.11: ಪಟ್ಟಣದ ಸತ್ಯನಿಕೇತನ ಪ.ಪೂ ಕಾಲೇಜಿನಲ್ಲಿ, ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ವಿಶ್ವಕ್ರಾಂತಿ ದಿವ್ಯ ಪೀಠದ ವತಿಯಿಂದ ಸೆ.13 ರಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ವಿಶ್ವಕ್ರಾಂತಿ ದಿವ್ಯ ಪೀಠದ ಸಂಸ್ಥಾಪಕ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ತಿಳಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿದ ಅವರು, ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ನಿಮಿತ್ಯ ಪ್ರತಿವರ್ಷ ವಿಶ್ವಕ್ರಾಂತಿ ದಿವ್ಯಪೀಠದ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ವಿವಿದ ಸ್ಪರ್ಧೇಗಳನ್ನು ಏರ್ಪಡಿಸಿ, ವಿದ್ಯಾರ್ಥಿಗಳಲ್ಲಿ ನಮ್ಮ ಇತಿಹಾಸ ಬಿಂಬಿಸುವ ಕಾರ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸೆ.13 ರಂದು ಪದವಿ: ವಿದ್ಯಾರ್ಥಿಗಳಿಗೆ 371 ಕಲಂ ಅನುಷ್ಠಾನ ಕುರಿತು ಮತ್ತು ಪದವಿ ಪೂರ್ವ: ವಿದ್ಯಾರ್ಥಿಗಳಿಗೆ ಭಾರತದ ಸ್ವಾತಂತ್ರದ ನಂತರ ಕಲ್ಯಾಣ ಕರ್ನಾಟಕದ ಸ್ಥಿತಿಗತಿ ವಿಷಯದ ಬಗ್ಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ 75ನೇ ಅಮೃತ ಮಹೋತ್ಸವದ ಪ್ರಮಾಣ ಪತ್ರ ನೀಡಲಾಗುವುದು, ಕಾರಣ ಹೆಚ್ಚಿನ ಸಂಖೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಎಂದು ತಿಳಿಸಿದ್ದಾರೆ.