ಸೆ.14ರಿಂದ ಅಕ್ಟೋಬರ್ 2ರವರೆಗೆ ಭಾಜಪದಿಂದ ವಿವಿಧ ಕಾರ್ಯಕ್ರಮ

ಮೈಸೂರು,ಸೆ.16:- ಸೇವಾ ಹೀ ಸಂಘಟನೆ ಎಂಬ ಪರಿಕಲ್ಪನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ಕರೆಯ ಮೇರೆಗೆ ಸೆ.14ರಿಂದ ಅಕ್ಟೋಬರ್ 2ರವರೆಗೆ ಸೇವಾಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಭಾರತೀಯ ಜನತಾಪಕ್ಷದಿಂದ ಕರ್ನಾಟಕದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ತಿಳಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳ ಮೂಲಕ ಅವರ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡುತ್ತಾ ಬಂದಿದ್ದಾರೆ. ಈ ವರ್ಷ ಪ್ರಧಾನಿಯವರ 70ನೇಜನ್ಮದಿನವಾಗಿದ್ದು, ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನದಂತೆ ಸೆ.14ರಿಂದ 20ರವರೆಗೆ ಪ್ರತಿ ಮಂಡಲದಲ್ಲಿ 70ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣೆಯ ಉಪಕರಣ ನೀಡುವುದು, 70ಬಡ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಕ ನೀಡುವುದು, ಕೋವಿಡ್-19 ನಮಿಯಮಗಳನ್ನು ಪಾಲಿಸಿ ಪ್ರತಿ ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೋನಿಗಳಲ್ಲಿ ಹಣ್ಣು ಹಂಪಲು ವಿತರಿಸುವುದು, ಸ್ಥಳೀಯ ಅವಶ್ಯಕತೆಗನುಗುಣವಾಗಿ ಆಸ್ಪತ್ರೆಯ ಮೂಲಕ ಕೋವಿಡ್-19 ರಿಮದ ಪೀಡಿತರಾದ 70ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ ಮಾಡುವುದು, ಯುವಮೋರ್ಚಾದ ವತಿಯಿಂದ ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳನ್ನು ಮಾಡುವುದು, ಪ್ರತಿ ಮಂಡಲದಲ್ಲಿ ಕನಿಷ್ಟ 1ರಕ್ತದಾನ ಶಿಬಿರ ಆಯೋಜಿಸುವುದು. ನಮ್ಮ ನಗರ ಹಾಗೂ ಜಿಲ್ಲೆಯ ವ್ಯಾಪ್ತಿಯಲ್ಲಿ ವಿವಿಧ ಮೋರ್ಚಾ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ನಡೆಸಲಾಗುವುದು ಎಂದರು.
ಸೆ.20 ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನದ ಪ್ರಯುಕ್ತ ಪಕ್ಷದ ಮೂಲಕ ಬೂತ್ ಸ್ತರದಲ್ಲಿ ಆಯೋಜಿಸಲ್ಪಡುವ 6ಅಖಿಲ ಭಾರತ ಕಾರ್ಯಕ್ರಮವೂ ಒಂದಾಗಿದ್ದು, ಎಲ್ಲಾ ಬೂತ್ ಗಳಲ್ಲಿ ಅವರ ಪ್ರತಿಮೆಗೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಗುವುದು. ಅಕ್ಟೋಬರ್ 2ಗಾಂಧಿ ಜಯಂತಿ ಪ್ರಯುಕ್ತ ಖಾದಿ ಉಪಯೋಗ, ಸ್ಥಾನೀಯ ಉತ್ಪಾದನೆಗಳನ್ನು ಪೆÇ್ರೀತ್ಸಾಹಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.