ಸೆ.15 ರಂದು ‘ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಕಾರ್ಯಕ್ರಮ


ಬಳ್ಳಾರಿ,ಸೆ.09 – ಸೆ.15 ರಂದು ಬೆಳಿಗ್ಗೆ 10 ಕ್ಕೆ ಜಿಲ್ಲೆಯ ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗ, ಶಾಲಾ- ಕಾಲೇಜುಗಳು ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ, ಗ್ರಾಮ ಪಂಚಾಯತ್, ಜಿಲ್ಲಾ, ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ “ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮವನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು.
ಜಿಲ್ಲೆಯ ಎಲ್ಲಾ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಗೆಯೇ ವಿವಿಧ ಎನ್.ಜಿ.ಓ ಗಳು, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಆನ್‍ಲೈನ್ ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ.
ಸಮಾಜ ಕಲ್ಯಾಣ ಇಲಾಖಾ ಸಚಿವರು ಸೆ.15 ರಂದು ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಗೆ ಓದಿಸುವುದರ “ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ನೊಂದಾಯಿಸುವ ಮೂಲಕ ಏಕಕಾಲದಲ್ಲಿ ಜಾಲಬಂಧದ (Virtual) ಮೂಲಕ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲು ಸೂಚಿಸಿರುತ್ತಾರೆ.
ಅದರಂತೆ ಲಿಂಕ್ https://thepreamble-swdkar.in  ಆನ್‍ಲೈನ್‍ನಲ್ಲಿ ನೊಂದಾಯಿಸಲು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲೆಯ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ಸೆ.15 ರಂದು ಬೆಳಿಗ್ಗೆ 10 ಕ್ಕೆ ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, “ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.