ಸೆ.21 ರಿಂದ 9-12ನೇ ತರಗತಿ ಆರಂಭಕ್ಕೆ ಸಿದ್ಧತೆ

ಮೈಸೂರು,ಸೆ.17: ಮಹಾಮಾರಿ ಕೊರೋನಾ ಭೀತಿಯ ನಡುವೆಯೂ ಸೆ.21 ರಿಂದ ಶಾಲೆಗಳ ಪ್ರಾರಂಭಕ್ಕೆ ಸಿದ್ದತೆ ನಡೆದಿದ್ದು, ಈ ಸಂಬಂಧ ಶಾಲಾ ಆಡಳಿತ ಮಂಡಳಿಗಳು ಸರ್ಕಾರದ ಅಧಿಕೃತ ಆದೇಶದ ನಿರೀಕ್ಷೆಯಲ್ಲಿದೆ.
9-12 ರ ವರೆಗಿನ ತರಗತಿಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಲಾಗಿದೆಯಾದರೂ, ಇನ್ನೂ ಈ ಕುರಿತು ಸ್ಪಷ್ಟ ಮಾಹಿತಿ ಶಾಲೆಗಳಿಗೆ ಸಿಕ್ಕಿಲ್ಲ.
ಪೆÇೀಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿ ಶಾಲೆಗಳ ಆರಂಭಕ್ಕೆ ಮುಂದಾಗಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವಾಲಯ ಕೆಲ ದಿನಗಳ ಹಿಂದೆ ಮಾರ್ಗಸೂಚಿ ಹೊರಡಿಸಿತ್ತು.ಆದರೆ ಶಿಕ್ಷಣ ಇಲಾಖೆಗೆ ಸರ್ಕಾರದ ಯಾವುದೇ ಅಧಿಕೃತ,ಸ್ಪಷ್ಟ ಸೂಚನೆ ಬಾರದ್ದರಿಂದ ಗೊಂದಲ ಉಂಟಾಗಿದ್ದು, ಈ ಮಧ್ಯೆಯೂ ಶಾಲೆಗಳ ಪ್ರಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ.
ಮೈಸೂರಲ್ಲೂ ಅಗತ್ಯ ಮುನ್ನೆಚ್ಚರಿಕೆಯೊಂದಿಗೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ದತೆ ನಡೆದಿದ್ದು, ಮತ್ತೊಮ್ಮೆ ಪೆÇೀಷಕರ ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.
ಕೆಲ ಪೆÇೀಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದ್ದರೂ, ಮತ್ತಷ್ಟು ಪೆÇೀಷಕರು ಹಿಂಜರಿಯುತ್ತಿದ್ದಾರೆ.
ಈಗಾಗಲೇ ಆನ್ ಲೈನ್ ತರಗತಿಗಳು ನಡೆಯುತ್ತಿದ್ದು, ಪ್ರಾಥಮಿಕ ತರಗತಿಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ ಎಂದು ಹೇಳಾಗುತ್ತಿದೆ.
ಶಾಲಾ ಆರಂಭ ಕುರಿತು ಸರ್ಕಾರದ ಅಧಿಕೃತ ಆದೇಶದ ನಿರೀಕ್ಷೆಯಲ್ಲಿದ್ದು, ಆದೇಶ ಸಿಕ್ಕಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಾಲೆಗಳನ್ನು ತೆರಯಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ.ಪಾಂಡುರಂಗ ಅವರು ಸಂಜೆವಾಣಿಗೆ ತಿಳಿಸಿದ್ದಾರೆ.
ಕೊರೋನಾ ಭೀತಿಯ ನಡುವೆಯೂ ಶಾಲಾ ಆರಂಭಕ್ಕೆ ಮುಂದಾಗಿರುವುದಕ್ಕೆ ಪರ ವಿರೋಧ ಆಭಿಪ್ರಾಯಗಳು ವ್ಯಕ್ತವಾಗಿದ್ದು, ಮುನ್ನೆಚ್ಚರಿಕೆ ವಹಿಸಿದರೇ ಸೂಕ್ತ.ಇಲ್ಲದಿದ್ದಲ್ಲಿ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಪೆÇೀಷಕರಲ್ಲಿ ಮನೆ ಮಾಡಿದೆ.