ಸೆ. 24 ರಂದು ಅಭಿನಂದನಾ ಸಮಾರಂಭ

ಹುಬ್ಬಳ್ಳಿ,ಸೆ22 : ಧಾರವಾಡ ಜಿಲ್ಲಾ ನಾಗರಿಕರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಹು-ಧಾ ಮಹಾನಗರ ಪಾಲಿಕೆಯ ಸದಸ್ಯರಾದ ರಾಜಣ್ಣ ಕೊರವಿ ಅವರಿಗೆ ಅಭಿನಂದನಾ ಸಮಾರಂಭವನ್ನು ಸೆ. 24 ರಂದು ಸಂಜೆ 4 ಗಂಟೆಗೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷರಾದ ಗಂಗಾಧರ ದೊಡ್ಡವಾಡ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು ಹಾಗೂ ಶಿರಹಟ್ಟಿ ಸಂಸ್ಥಾನ ಮಠದ ಜಗದ್ಗುರು ಶ್ರೀ ಫಕೀರಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಕ.ವಿ.ವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ್ ಬೆಲ್ಲದ್, ಕುಸುಮಾವತಿ ಶಿವಳ್ಳಿ, ಪ್ರಸಾದ್ ಅಬ್ಬಯ್ಯ, ಪ್ರದೀಪ್ ಶೆಟ್ಟರ್, ಎಸ್.ವಿ.ಸಂಕನೂರ, ಹು-ಧಾ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಉಪ ಮೇಯರ್ ಉಮಾ ಮುಕುಂದ್, ಪಿರೋಜಿ, ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಫಿರೋಜಿ ಖಂಡೇಕಾರ್, ಪೃಥ್ವಿರಾಜ್, ಭೀಮಣ್ಣ ಬಡಿಗೇರ್, ಈಶ್ವರ ಶಿರಸಂಗಿ, ಬಸವರಾಜ ಹೆಬ್ಬಳ್ಳಿ, ಭಾಸ್ಕರ್ ಬಾರಕೇರ್ ಉಪಸ್ಥಿತರಿದ್ದರು.