ಸೆ.26ರಂದು ನಾಗರಿಕ ಸೇವೆಗಳ ಪರೀಕ್ಷೆ ಅರಿವು ಕಾರ್ಯಕ್ರಮ

ಬೀದರ:ಸೆ.16: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಂಟಿಯಾಗಿ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಪರೀಕ್ಷೆಗಳ ಕುರಿತು ಅರಿವು ಮೂಡಿಸುವ ವಿನೂತನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆ ಬೀದರ್‍ನಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ನಾಗರೀಕ ಸೇವೆಗಳಿಗೆ ಸಂಬಂಧಿಸಿದ ಪರೀಕ್ಷೆಗಳ ಕುರಿತು ಅರಿವು ಮೂಡಿಸಲು ಹಿಂದಿನ ಜಿಲ್ಲಾಧಿಕಾರಿ ಪಿ.ಸಿ.ಜಾಫರ್ ನಡೆಸಿದ ವಿಶೇಷ ಕಾರ್ಯಕ್ರಮವನ್ನು ಮುಂದುವರೆಸುವ ಒಂದು ಪ್ರಾಮಾಣಿಕ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು.
ನಾಗರಿಕ ಸೇವೆಗಳ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಅರಿವಿನ ಕೊರತೆ ಇದೆ. ಇಂಗಿಷ್ ಬರುತ್ತಿದ್ದರೆ ಮಾತ್ರ ಪರೀಕ್ಷೆ ಬರೆಯಲು ಸಾಧ್ಯ. ಎರಡ್ಮೂರು ಭಾಷೆಗಳು ಬರಬೇಕು ಎಂದೆಲ್ಲಾ ವಿದ್ಯಾರ್ಥಿಗಳಲ್ಲಿ ಸಾಕಷ್ಟು ತಪ್ಪು ಕಲ್ಪನೆಗಳಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಯೋಚಿಸಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಿಂದ, ಬೀದನಂತಹ ಗಡಿ ಭಾಗದ ಪ್ರದೇಶಗಳ ವಿದ್ಯಾರ್ಥಿಗಳು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಪಾಸಾಗುವ ಸಂಖ್ಯೆಯು ಬಹಳ ಕಡಿಮೆ ಇದೆ. ಬೀದರದಂತಹ ಹಿಂದುಳಿದ ಜಿಲ್ಲೆಯಿಂದ ಒಬ್ಬರು ಅಥವಾ ಇಬ್ಬರು ಮಾತ್ರ ನಾಗರಿಕ ಸೇವೆಗಳ ಪರೀಕ್ಷೆ ಪಾಸು ಮಾಡಿಕೊಳ್ಳುತ್ತಾರೆ. ನಾವು ನಿರೀಕ್ಷೆ ಮಾಡಿದ ರೀತಿಯಲ್ಲಿ ಹೆಚ್ಚು ಜನರು ಪಾಸಾಗುತ್ತಿಲ್ಲ. ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಏನಾದರು ಅವಕಾಶ ಕಲ್ಪಿಸಬೇಕು ಎಂದು ಯೋಚಿಸಿ ಈ ಕಾರ್ಯಕ್ರಮ ರೂಪಿಸಲಾಗಿದೆ. ನಾವು ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಇವತ್ತಿನ ಕಾಲಕ್ಕೆ ತಕ್ಕಂತೆ ಹಿಂದಿನ ಉತ್ತಮ ಕಾರ್ಯಕ್ರಮಗಳ ಪುನಶ್ಚೇತನಕ್ಕೆ ಒತ್ತು ಕೊಡುತ್ತಿದ್ದೇವೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಸೆ.26ರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯ ವರೆಗೆ ನಡೆಸಲಾಗುವುದು. ಈ ಕಾರ್ಯಕ್ರಮವನ್ನು ಜಿಲ್ಲೆಯ ಜನಪ್ರತಿನಿಧಿಗಳಿಂದ ಉದ್ಘಾಟನೆಗೊಳಿಸಿದ ನಂತರ ಆಕಾಂಕ್ಷಿಗಳನ್ನು ಉದ್ದೇಶಿಸಿ ಏಳು ಜನ ಐಎಎಸ್, ಇಬ್ಬರು ಐಪಿಎಸ್, ಇಬ್ಬರು ಐಆರ್‍ಎಸ್ ಹಾಗೂ ಐವರು ಕೆಎಎಸ್ ಅಧಿಕಾರಿಗಳು ಮಾತನಾಡಲಿದ್ದಾರೆ. ಈ ಅವಕಾಶವನ್ನು ಜಿಲ್ಲೆಯ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಮಾಧ್ಯಮಗಳ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.
ಅಂದು ಜಿಲ್ಲಾ ರಂಗಮಂದಿರದಲ್ಲಿ 300 ಆಸನಗಳನ್ನು ಮಾತ್ರ ಇರುವುದರಿಂದ ಆಕಾಂಕ್ಷಿಗಳು hಣಣಠಿs://ಡಿb.gಥಿ/ಞg2ಟಟಿu ಲಿಂಕ್‍ನ್ನು ಬಳಸುವ ಮೂಲಕ ನೋಂದಣಿ ಮಾಡಬಹುದು. 300 ಕ್ಕಿಂತ ಹೆಚ್ಚಿನ ಆಕಾಂಕ್ಷಿಗಳು ನೋಂದಣೆ ಮಾಡಿದಲ್ಲಿ ಈ ಕಾರ್ಯಕ್ರಮವನ್ನು ಙouಣube ಲಿಂಕ್ ಥಿouಣube/ಛಿiviಟse ಡಿviಛಿesbiಜಚಿಡಿ ಮತ್ತು ಜಿಚಿಛಿebooಞ ಲಿಂಕ್ hಣಣಠಿs://ತಿತಿತಿ.ಜಿಚಿಛಿebooಞ.ಛಿom/ಜeo.biಜಚಿಡಿ ಮುಖಾಂತರ ವಿಕ್ಷೀಸಬಹುದು.
ಆಕಾಂಕ್ಷಿತ ವಿದ್ಯಾರ್ಥಿಗಳು ರಂಗಮಂದಿರದಲ್ಲಿ ಅಂದು ಬೆಳಿಗ್ಗೆ 9 ರಿಂದ 9.15ರೊಳಗಾಗಿ ಆಗಮಿಸಿ ಕಡ್ಡಾಯವಾಗಿ ಮಾಸ್ಕ ಧರಿಸಿ ಆಸನದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ಎಲ್.ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇದ್ದರು.