ಸೆ. 3ಕ್ಕೆ ಕರ್ನಾಟಕ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ

ಬೀದರ: ಸೆ.1:ಸೆಪ್ಟೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಸಂಘದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರಾದ ಸೂರ್ಯಕಾಂತ ಶೆಟಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಂಘವು ಕಾಲೇಜಿನ ಏಳ್ಗೆಗಾಗಿ ಹಾಗೂ ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಕಲಿತ ಶಾಲೆ, ಕಲಿಸಿದ ಗುರುಗಳ ಹಾಗೂ ಮುಂದಿನ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ನಿಸ್ವಾರ್ಥದಿಂದ ಶ್ರಮಿಸುತ್ತಿದೆ. ಹೀಗಾಗಿ ಎಲ್ಲಾ ಹಳೆಯ ವಿದ್ಯಾರ್ಥಿಗಳು ಅಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಸಭೆ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.