
ಕಲಬುರಗಿ,ಆ.19:ಜಿಲ್ಲಾಡಳಿತ ವತಿಯಿಂದ ಇದೇ ಸೆಪ್ಟೆಂಬರ್ 6ರಂದು ಮಧ್ಯಾಹ್ನ 12 ಗಂಟೆಗೆ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿ ರವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆ ಒಬ್ಬ ಸಮಿತಿ ಅಧ್ಯಕ್ಷರನ್ನು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಮಾತನಾಡಿ, ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ವೇದಿಕೆ ಅಲಂಕಾರ ಮಾಡಲಾಗುವುದು ಆಮಂತ್ರಣ ಪತ್ರಗಳು ಮುದ್ರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಅಂದು ನಡೆಯುವ ಜಯಂತಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಸರಕಾರಿ ಅರೆ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ತಾಲೂಕು ಕಚೇರಿಗಳಲ್ಲಿ ಅಂದು ಬೆಳಿಗ್ಗೆ 9 ಗಂಟೆ ಜಯಂತಿಯನ್ನು ಆಚರಿಸಬೇಕೆಂದರು. ಕುಡಿಯುವ ನೀರು, ಸಚ್ಛತೆ ಕಾಪಾಡಿಕೊಂಡು ಹೋಗಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಮಾಜದ ಮುಖಂಡರಾದ ಶ್ರೀ ಕೃಷ್ಣ ಜಯಂತಿ ಅಧ್ಯಕ್ಷರಾದ ರವಿಚಂದ್ರ ಉದನೂರ, ಆರ್. ಆರ್. ಯಾದವ, ಶರಣಬಸಪ್ಪ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಕಲ್ಲಪ್ಪ ಯಾದವ, ಸದಸ್ಯರು ಸಮಾಜದ ಮುಖಂಡರ ಶಿವರಣಪ್ಪ ಯಾದ ಶಾಮರಾಮ ಗೋಟು ಲಕ್ಷ್ಮೀಕಾಂತ ಕಟ್ಟಿಮನಿ ಅವರು ಉಪಸ್ಥಿತರಿದ್ದರು.