ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ “ ಮಕ್ಕಳ ದಿನಾಚರಣೆ ” 

ಸಂಜೆವಾಣಿ ವಾರ್ತೆ

ದಾವಣಗೆರೆ. ನ.20; ನಗರದ ಸೇಂಟ್‌ಜಾನ್ಸ್ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮನ್ ಕಿ ಬಾತ್ ನ ಪರೀಕ್ಷಾ ಪೇ ಚರ್ಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಮಂತ್ರಿ ಕಛೇರಿಯಿಂದ ಪ್ರಶಸ್ತಿ ಪಡೆದ ಕುಮಾರಿ ಸಾನ್ವಿ ಕೆ ಎಂ ಅವರನ್ನು ಸನ್ಮಾನಿಸಲಾಯಿತು.ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ವಿಜೇತರಾಗಿ ವಿದ್ಯಾ ಸಂಸ್ಥೆಯ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತು ಬಂದಿರುವ ಎಲ್ಲಾ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ  ಹೆಚ್.ಅನಿಲ್‌ಕುಮಾರ್‌, ಕಾರ್ಯದರ್ಶಿಗಳಾದ ಟಿ ಎಂ ಉಮಾಪತಯ್ಯ ಹಾಗೂ ಖಜಾಂಚಿಗಳಾದ  ಪ್ರವೀಣ್ ಹುಲ್ಲುಮನೆ ನೆಹರುರವರ ಭಾವಚಿತ್ರಕ್ಕೆ ಪುಷ್ಪಗುಚ್ಚಗಳನ್ನು ಅರ್ಪಿಸಿದರು.ಶಾಲಾ ಪ್ರಾಂಶುಪಾಲರು ಮಾತನಾಡುತ್ತ ನೆಹರುರವರ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತಮ್ಮ ಪ್ರೀತಿಯ ಹಾಗು ನೆಚ್ಚಿನ ಮಕ್ಕಳನ್ನು ರಂಜಿಸಲು ಶಿಕ್ಷಕ ವರ್ಗದಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.