ಸೇಡಂ ಬ್ಲಾಕ್ ಕಾಂಗ್ರೆಸ್ ಸಮಿತಿ ನಡೆ ಸಿದ್ದರಾಮಯ್ಯರ 75 ನೇ ಅಮೃತ ಮಹೋತ್ಸವ ಕಡೆ

ಸೇಡಂ,ಜು,29 : ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 3 ರಂದು ದಾವಣಗೇರೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು ಸೇಡಂ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕು ಎಂದು ಮಾಜಿ ಕಾಡ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಹಾಗೂ ಮಹಾಂತೇಶ್ ಕೌವಲಗಿ ತಿಳಿಸಿದರು.
ಪಟ್ಟಣದ ಊಡಗಿ ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 40 ವರ್ಷದ ರಾಜಕೀಯ ಜೀವನದಲ್ಲಿ ಹಿಂದೆಂದು ಜನ್ಮ ದಿನವನ್ನು ಆಚರಿಸಿಕೊಳ್ಳದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 75 ನೇ ಜನ್ಮದಿನವನ್ನು ಅಮೃತಮಹೋತ್ಸವವನ್ನಾಗಿ ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ. ಹೀಗಾಗಿ ಸೇಡಂ ತಾಲೂಕಿನ ಪ್ರತಿಯೊಂದು ಹಳ್ಳಿಯಿಂದಲು ಕನಿಷ್ಟ 10 ಕ್ಕಿಂತ ಹೆಚ್ಚು ಕಾರ್ಯಕರ್ತರು ಆಗಮಿಸಬೇಕು ಎಂದು ತಾಲೂಕು ಘಟಕದ ವತಿಯಿಂದ ಮನವಿ ಮಾಡಲಾಯಿತು.
ಇನ್ನೂ ಈ ಅಭೂತಪೂರ್ವ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಉದ್ಘಾಟಿಸಲಿದ್ದಾರೆ. ಹಾಗೂ ಈ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆಯವರು, ರಾಜ್ಯಾಧ್ಯಕ್ಷರಾದ ಡಿ.ಕೆ ಶಿವುಕುಮಾರ್, ಸೇರಿದಂತೆ ರಾಜ್ಯದ ಎಲ್ಲ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವಶರಣರೆಡ್ಡಿ ಪಾಟೀಲ್, ಮಲ್ಲಿಕಾರ್ಜುನ್ ಭಂಕೂರ್, ಸಿದ್ದು ಬಾನರ್, ಸತೀಶ್ ಪೂಜಾರಿ, ಭೀಮರಾವ್ ಅಳ್ಳೊಳ್ಳಿ, ಜಗನ್ನಾಥ ಚಿಂತಪಳ್ಳಿ, ಜೈ ಭೀಮ್ ಊಡಗಿ, ಭೀಮಶಂಕರ್ ಕೊಳ್ಳಿ, ಅಶೋಕ್ ದಂಡೋತಿ, ಲಚ್ಚಪ್ಪ ಜಮಾದಾರ್ ಸೇರಿದಂತೆ ಇನ್ನಿತರರಿದ್ದರು.