ಸೇತುವೆಯಿಂದ ಕೆಳಗೆ ವಾಹನ ಪಲ್ಟಿ 7 ಮಂದಿ ಸ್ಥಳದಲ್ಲೇ ಸಾವು

ಶಿಮ್ಲಾ,ನ.16-ವಾಹನವೊಂದು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 7 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ.
ಈ ಅವಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೆ ಕಾರಣವೇನು?
ವಾಹನ ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಕೇತಿ ಖುದ್ ನದಿಗೆ ಬಿದ್ದು ಈ ಅಪಘಾತ ಸಂಭವಿಸಿದೆ. 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು  ಪೊಲೀಸ್  ಅಧಿಕಾರಿ ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 279 (ರ್ಯಾಶ್ ಡ್ರೈವಿಂಗ್), ಸೆಕ್ಷನ್ 338 (ಯಾವುದೇ ವ್ಯಕ್ತಿಗೆ ತೀವ್ರ ನೋವನ್ನುಂಟು ಮಾಡುತ್ತಾರೆ) ಮತ್ತು ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗಿದ್ದಾರೆ) ಅಡಿಯಲ್ಲಿ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಸ್ತೆ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಸರ್ಕಾರವು ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.