ಸೇನಾ ಗುಂಡೇಟಿಗೆ ಎಲ್‌ಇಟಿ ಉಗ್ರರ ಬಲಿ

ಶ್ರೀನಗರ,ನ.೭-ಭದ್ರತಾಪಡೆಗಳು ಗುಂಡಿಕ್ಕಿ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರಗಾಮಿಗಳನ್ನು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾದಲ್ಲಿ ಸಂಭವಿಸಿದೆ.
ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಾಗರೀಕ ಮೃತಪಟ್ಟಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪುಲ್ವಾಮಾ ಜಿಲ್ಲೆಯ ಪಾಂಪೋರ್‌ನ ಮಿಗ್‌ಲಾಲ್‌ಪೋರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿಯಿತು.
ಉಗ್ರಗಾಮಿಗಳು ಭದ್ರತಾ ಪಡೆಗಳ ಮೇಲೆ ಗ್ರನೇಡ್ ದಾಳಿ ನಡೆಸಿದರು. ಸ್ವಯಂಚಾಲಿತ ಬಂದೂಕಿನಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ತಕ್ಷನ ಕಾರ್ಯಪವೃತ್ತರಾದ ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಭದ್ರತಾಪಡೆ ಕಾರ್ಯನಿರ್ವಹಿಸಿದೆ.