ಸೇವಾಭಾರತಿ ಶಾಲೆಯಲ್ಲಿ ಆಕರ್ಷಕವಾಗಿ ಮೂಡಿ ಬಂದ ರಂಗೋಲಿ ಚಿತ್ರಗಳು

ಸಂಜೆವಾಣಿ ವಾರ್ತೆ
ಚಾಮರಾಜನಗರ.ಫೆ.29-ನಗರದ ಸೇವಾ ಭಾರತಿಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ರಂಗೋಲಿಯಲ್ಲಿ ಮೂಡಿ ಬಂದ ವಿಜ್ಞಾನಕ್ಕೆ ಸಂಬಂಧಪಟ್ಟ ಚಿತ್ರಗಳು. ವಿಜ್ಞಾನ ದಿನದ ಅಂಗವಾಗಿ ಸೇವಾ ಭಾರತಿ ಪ್ರೌಢ ಶಾಲೆಯಲ್ಲಿ ಇಂದು ಶಾಲಾ ವಿದ್ಯಾರ್ಥಿಗಳು ಬಣ್ಣ ಬಣ್ಣದ ರಂಗೋಲಿಯಲ್ಲಿ ವಿಜ್ಞಾನಕ್ಕೆ ಸಂಬಂಧಪಟ್ಟ ಕಲೆಗಳನ್ನು ಬಿಡಿಸುವುದರ ಮೂಲಕ ಪ್ರದರ್ಶನ ನಡೆಸಿದರು.
ಈ ಕಾರ್ಯಕ್ರಮಕ್ಕೆ ಸೇವಾ ಭಾರತಿಗಣ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಹಾಗೂ ಎಲ್ಲಾ ಶಿಕ್ಷಕರ ಸಹಯೋಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ವಿಭಾಗವಹಿಸಿದ್ದರು. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.