ಸೈಕಲ್ ಜಾಥಾದ ಮೂಲಕ ಮತದಾನ ಜಾಗೃತಿ ಅಭಿಯಾನ

oplus_0


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಏ.18: ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು ಹಾಗೂ ಮತದಾನ ನಮ್ಮ ಕರ್ತವ್ಯವಾಗಿದೆ ಮತ್ತು ನಮ್ಮ ಜವಾಬ್ದಾರಿಯಾಗಿದೆ ಎಂದು ಪಟ್ಟಣ ಪಂಚಾಯತಿಯ ಪ್ರಭಾರಿ ಮುಖ್ಯಾಧಿಕಾರಿ ಶೋಭಾ ಹೇಳಿದರು.
ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸೈಕಲ್ ಜಾಥಾದ ಮೂಲಕ ಮತದಾನ ಜಾಗೃತಿ ಜಾಥ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ತೆಕ್ಕಲಕೋಟೆ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪಟ್ಟಣ ಪಂಚಾಯತಿ ಸಿಬ್ಬಂದಿಗಳಾದ ಸುಬ್ರಹ್ಮಣ್ಯ, ಭಾಷಾ, ಖಾದರ್ ಭಾಷಾ ಹಾಗೂ ಇನ್ನಿತರರು ಇದ್ದರು.