ಸೈದೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ

ಸಂಜೆವಾಣಿ ವಾರ್ತೆ
 ಶಿವಮೊಗ್ಗ, ಫೆ.೯;  ಸಾಗರ ತಾಲ್ಲೂಕಿನ ಸೈದೂರು ಗ್ರಾ.ಪಂ ಯಲ್ಲಿ ಭಾರತ ಸಂವಿಧಾನ ಅಂಗೀರಿಸಿದ 75 ನೇ ವರ್ಷಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಗ್ರಾ.ಪಂ ಸಹಯೋಗದಲ್ಲಿ ಇಂದು ಕೈಗೊಳ್ಳಲಾಯಿತು. ಗ್ರಾ.ಪಂ ಉಪಾಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಯಮನೂರಪ್ಪ ಉಪನ್ಯಾಸ ನೀಡಿದರು. ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.