ಸೋಂಕಿಗೆ ಬಲಿಯಾದ ಶಿಕ್ಷಕರ ವರದಿ ನೀಡಲು ಸುರೇಶ್ ಕುಮಾರ್ ನಿರ್ದೇಶನ

ಬೆಂಗಳೂರು, ಮೇ 16-ಕೋವಿಡ್ ನಿಂದ ಶಿಕ್ಷಕರು, ಉಪನ್ಯಾಸಕರು ಮೃತಪಟ್ಟಿರುವ ಕುರಿತು ತಕ್ಷಣ ವರದಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಣಣ ಸಚಿವ ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.
ಕೋವಿಡ್ ಮತ್ತು ಇತ್ತೀಚೆಗೆ ರಾಜ್ಯದಲ್ಲಿ ಎರಡು ವಿಧಾನಸಭೆ ಮತ್ತು ಒಂದು ಲೋಕಸಭೆ ಉಪಚುನಾವಣೆ ವೇಳೆ ಕರ್ತವ್ಯ ನಿರ್ವಹಣೆಯಲ್ಲಿ ತೊಡಗಿದ್ದ ಹಲವು ಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರು ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.‌
ಈ ಬಗ್ಗೆ ವರದಿ ನೀಡುವಂತೆ ಅವರು ಸೂಚಿಸಿದ್ದಾರೆ.
ಸೋಂಕಿನಿಂದಾಗಿ ಕಳೆದ ಏಪ್ರಿಲ್ ತಿಂಗಳವರೆಗೆ ಅಸುನೀಗಿದ ಶಿಕ್ಷಕರು ಮತ್ತು ಉಪನ್ಯಾಸಕರ ಬಗ್ಗೆ ಶೀಘ್ರ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚಿಸಿದ್ದಾರೆ.
ಕರ್ತವ್ಯ ನಿರ್ವಹಣೆ ವೇಳೆ ಸೋಂಕಿನಿಂದ ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ಮಾಧಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿ ಇದು ದುರದೃಷ್ಟಕರ ಎಂದಿದ್ದಾರೆ.