ಸೋಂಕಿಗೆ ೪೦ ಮಂದಿ ಬಲಿ

ನವದೆಹಲಿ,ಜು.೨೦-ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸಂಖ್ಯೆ ಏರಿಳಿತವಾಗುತ್ತಿದ್ದು. ಇಂದೂ ಕೂಡ ಸೋಂಕು ಸಂಖ್ಯೆ ೨೦ ಸಾವಿರ ಗಡಿ ದಾಟಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೨೦,೫೫೭ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ೪೦ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಇದೇ ಅವಧಿಯಲ್ಲಿ ೧೮,೫೧೭ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸೋಂಕು ಸಂಖ್ಯೆ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ.೦.೩೩ ಕ್ಕೆ ಹೆಚ್ಚಳವಾಗಿದೆ. ಜೊತೆಗೆ ಸೋಂಕಿನ ಒಟ್ಟು ಚೇತರಿಕೆ ಪ್ರಮಾಣ ಶೇ.೯೮.೪೭ ಕ್ಕೆ ಕುಸಿದಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ,೧,೪೩,೬೫೪ ಕ್ಕೆ ಹೆಚ್ಚಳವಾಗಿದೆ. ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಒಟ್ಟಾರೆ ಸೋಂಕಿನ ಸಂಖ್ಯೆ ೪,೩೭,೮೩,೦೬೭ಕ್ಕೆ ಹೆಚ್ಚಳವಾಗಿದೆ. ಇದುವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೫,೨೫,೭೮೫ಕ್ಕೆ ಹೆಚ್ಚಳವಾಗಿದೆ.

ದೇಶದಲ್ಲಿ ಕೋವಿಡ್ ಸಂಖ್ಯೆ ಏರಿಳಿತದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮತ್ತೆ ಆತಂಕ ಎದುರಾಗಿದೆ. ಹಲವು ರಾಜ್ಯಗಳಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವುದು ಮತ್ತಷ್ಟು ಆತಂಕ ಸೃಷ್ಠಿ ಮಾಡಿದೆ.

ಸೋಂಕು ಸಂಖ್ಯೆ ದಿನನಿತ್ಯ ಏರಿಳಿತ ವಾಗುತ್ತಿರುವ ಹಿನ್ನಲೆಯಲ್ಲಿ ಚೇತರಿಕೆಯ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ತಡೆಗೆ ಲಸಿಕೆ ನೀಡಿಕೆ ಪ್ರಮಾಣವನ್ನು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಹೆಚ್ಚು ಮಾಡುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.