ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡಲು ಆಗ್ರಹ

ರಾಯಚೂರು.ಏ.೩೦- ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡಬೇಕೆಂದು ಒತ್ತಾಯಿಸಿ ಸಮಾವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ಎಕ್ಬಾಲ್ ಅಹ್ಮದ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಇತ್ತಿಚೀಗೆ ನಗರದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗಿ ಹರಡುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಬಡ ಸೋಂಕಿತರಿಗೆ ಪ್ರತಿ ಬೆಡ್‌ಗೆ ೧೫ ರಿಂದ ೨೦ ಸಾವಿರವರೆಗೆ ಹಣ ಪಡೆಯುತ್ತಿದ್ದಾರೆ. ಇದರಿಂದ ರೋಗಿಗಳು ತುಂಬಾ ತೊಂದರೆಯಲ್ಲಿ ಅನುಭವಿಸುತ್ತಿದ್ದಾರೆ.
ಹಣ ಪಾವತಿ ಮಾಡದೇ ಸೋಂಕಿತರು ಸತ್ತು ಹೋಗುತ್ತಿದ್ದಾರೆಂದು ದೂರಿದರು. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಲಾಕ್‌ಡೌನ್‌ಯಿಂದ ಸಾರ್ವಜನಿಕರು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದು ಉಪ ಜೀವನ ನಡೆಸುವುದು ತುಂಬಾ ಕಷ್ಟದ ಪರಿಸ್ಥಿತಿ ಅನುಭವಿಸುತ್ತಿದ್ದಾರೆ.
ಖಾಸಗಿ ಆಸ್ಪತ್ರೆಯವರು ಬಡ ಸೋಂಕಿತ ರೋಗಿಗಳಿಂದ ಹೆಚ್ಚುವರೆ ಹಣ ಪಡೆದು ಹಗಲು ದರೋಡೆಯನ್ನು ನಡೆಸುತ್ತಿದ್ದಾರೆಂದು ಆರೋಪಿಸಿದರು.
ವೈದ್ಯರು ವೈದ್ಯಾಧಿಕಾರಿಗಳಂತೆ ವರ್ತಿಸದೇ ಕಟುಕನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ವಾಸ್ತವ್ಯ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸೋಂಕಿತ ರೋಗಿಗಳಿಂದ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸೋಂಕಿತರಿಗೆ ಉಚಿತ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದರು.