ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಳ

ಲಂಡನ್, ಜ. ೧೪- ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದವರು ಕನಿಷ್ಠ ೫ ತಿಂಗಳವರೆಗೂ ಕೊರೊನಾ ವಿರುದ್ಧದ ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಅಧ್ಯಯನ ವರದಿಗಳು ಹೇಳಿವೆ.
ಇಂಗ್ಲೆಡ್‌ನ ವಿಜ್ಞಾನಿಗಳು ಕೊರೊನಾ ಸೋಂಕಿತರ ಬಗ್ಗೆ ನಡೆಸಿರುವ ಅಧ್ಯಯನ ವರದಿಗಳ ಪ್ರಕಾರ ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದವರಲ್ಲಿ ಕೊರೊನಾವನ್ನು ತಡೆಗಟ್ಟುವ ಪ್ರತಿಕಾಯಗಳು ಅಭಿವೃದ್ಧಿಯಾಗುತ್ತವೆ. ಇದರಿಂದ ಕನಿಷ್ಠ ೫ ತಿಂಗಳವರೆಗೂ ಅವರಿಗೆ ಸೋಂಕು ತಗಲುವ ಭೀತಿ ಇರುವುದಿಲ್ಲ ಎಂದು ವರದಿಗಳು ಹೇಳಿವೆ.
ಇಂಗ್ಲೆಡ್‌ನ ಸಾರ್ವಜನಿಕ ಆರೋಗ್ಯ ಇಲಾಖೆ ಈ ವರದಿಗಳನ್ನು ಬಿಡುಗಡೆ ಮಾಡಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದವರು ಸೋಂಕನ್ನು ಹರಡುವ ಸಾಧ್ಯತೆಯೂ ಕಡಿಮೆ ಇರುತ್ತದೆ. ಇವರಲ್ಲಿ ಮತ್ತೆ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯೂ ಕಡಿಮೆ ಎಂದು ವರದಿಗಳು ಹೇಳಿವೆ ಎಂದರು.
ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದವರಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆ ಇವೆ. ಹಾಗಾಗಿ ಸೋಂಕಿನಿಂದ ಗುಣಮುಖರಾದವರಲ್ಲಿ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗುತ್ತದೆ ಎಂಬುದು ದೃಢಪಟ್ಟಿದೆ ಎಂದು ವರದಿಗಳು ಹೇಳಿವೆ.