ಸೋಂಕಿತರ ಆರೋಗ್ಯ ವಿಚಾರಿಸಿದ ಲಕ್ಷ್ಮಣ ಸವದಿ

ದೇವದುರ್ಗ : ಕೋವಿಡ್ ಕೇರ್ ಸೆಂಟರ್‌ಗೆ ಸಚಿವರ ಭೇಟಿ
ರಾಯಚೂರು, ಜೂ.೦೪.- ಜಿಲ್ಲೆಯ ದೇವದುರ್ಗ ಪಟ್ಟಣದ ಹೊರ ವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್‌ಗೆ ಜೂನ್ ೩ರ ಗುರುವಾರ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಭೇಟಿ ನೀಡಿ ಪರಿಶೀಲಿಸಿ, ಕೋವಿಡ್ ಸೋಂಕಿತರ ಆರೋಗ್ಯವನ್ನು ವಿಚಾರಿಸಿದರು.
ಕೋವಿಡ್ ಸೋಂಕಿತರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, ನಿಮಗೆ ಒಳ್ಳೆಯ ಊಟ ಸಿಗ್ತಾ ಇದೆಯಾ, ಕುಡಿಯಲು ಬಿಸಿ ನೀರು ನೀಡ್ತಾರ, ವಸತಿ ವ್ಯವಸ್ಥೆ ಚೆನ್ನಾಗಿದೆಯ ಎಂದು ಕೇಳಿದರು, ಈ ಸಂದರ್ಭದಲ್ಲಿ ರೋಗಿಗಳು ಕೋವಿಡ್ ಆರೈಕೆ ಕೇಂದ್ರಗಳ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದರು, ಈ ಸಂದರ್ಭದಲ್ಲಿ ಆದಷ್ಟು ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಯೋಚನೆ ಮಾಡಬೇಡಿ ಎಂದು ಸೋಂಕಿತರಿಗೆ, ಸಚಿವರು ಧೈರ್ಯ ತುಂಬಿದರು.
ಕೋವಿಡ್ ಸೋಂಕಿತರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಪ್ರತಿದಿನ ಬೆಳಗಿನ ಸಮಯದಲ್ಲಿ ಯೋಗಾಭ್ಯಾಸ ಹಾಗೂ ಧ್ಯಾನ ಮಾಡಬೇಕು, ಕೋವಿಡ್ ಎರಡನೇ ಅಲೆಯ ವಿರುದ್ಧ ಜಾಗೃತರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದರಾದ ಸಂಗಣ್ಣ ಕರಡಿ, ದೇವದುರ್ಗ ಶಾಸಕ ಶಿವನಗೌಡ ನಾಯಕ, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷರ ತ್ರಿವಿಕ್ರಮ್ ಜೋಷಿ, ಜಾಲಹಳ್ಳಿ ಜಿಲ್ಲಾ ಪಂಚಾಯತ ಸದಸ್ಯ ವೀರಣ್ಣ ಪಾಣಿ ಸಾಹುಕಾರ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್ ಮಧುರಾಜ್ ಸೇರಿದಂತೆ ವಿವಿಧ ಮುಖಂಡರು ಇದ್ದರು.