ಸೋಂಕಿನ ಅಬ್ಬರ: ಭಯ ಅಗತ್ಯವಿಲ್ಲ

ನವದೆಹಲಿ, ಏ.೧೮- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಕಠೋರವಾಗಿದೆ ಆದರೆ ಜನರು ಭಯಭೀತರಾಗಬಾರದು ಇಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ದೆಹಲಿ ಜನರಿಗೆ ಮನವಿ ಮಾಡಿದ್ದಾರೆ.
ಕೊರೋನಾ ಸೋಂಕು ಸಮಸ್ಯೆ ಇತ್ಯರ್ಥಕ್ಕಾಗಿ ಸರ್ಕಾರ ೩- ೪ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ
ದೆಹಲಿಯಲ್ಲಿ ಇತ್ತೀಚಿಗೆ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದು ಸಹಜವಾಗಿಯೇ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಆದರೂ ಜನರು ಯಾವುದೇ ಕಾರಣಕ್ಕೂ ಭಯಪಡುವುದು ಬೇಡ .ಸರ್ಕಾರ ಸಮಸ್ಯೆಯನ್ನು ಎದುರಿಸಲು ಸಜ್ಜಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೋಂಕು ಸಮಸ್ಯೆ ಸಮರ್ಥವಾಗಿ ನಿರ್ವಹಿಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಒಂದು ತಿಂಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಅದಕ್ಕೆ ಕಾರಣ ದಿನನಿತ್ಯ ಸೋಂಕು ಸಂಖ್ಯೆ ಏರಿಕೆಯಾಗುತ್ತಿರುವುದು.ಕೊರೊನಾ ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ನೆನ್ನೆ ಒಂದೇ ದಿನ ೨೪, ೩೭೫ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇದು ದೆಹಲಿಯ ಇತಿಹಾಸದಲ್ಲಿ ಅತಿ ಹೆಚ್ಚಿನ ಸಂಖ್ಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ೬ ಸಾವಿರದಿಂದ ೧೭ ಸಾವಿರದವರೆಗೆ ಹಾಸಿಗೆ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ ಅಗತ್ಯ ಎದುರಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹಾಸಿಗೆಗಳನ್ನು ಹೆಚ್ಚಳ ಮಾಡಲಾಗುವುದು ಎಂದು ಅವರು ತಿಳಿಸಿದರು