ಸೋಂಕಿನ ಹೊಡೆತಕ್ಕೆ ರಾಜ್ಯ ಕಂಗಾಲು: ಒಂದೇ ದಿನ 34,804 ಜನರಿಗೆ ಸೋಂಕು,143 ಮಂದಿ ಸಾವು

ಬೆಂಗಳೂರು, ಏ . 25- ರಾಜ್ಯದಲ್ಲಿಂದು ಮಹಾಮಾರಿ ಕೊರೊನಾ‌ ಹಿಂದೆಂದಿಗಿಂತ ದಾಖಲೆ ಪ್ರಮಾಣದಲ್ಲಿ ಸೋಂಕು ದಾಖಲಾಗಿದ್ದು, ಒಂದೇ ದಿನ 34,804 ಪ್ರಕರಣಗಳು ದಾಖಲಾಗಿವೆ.
ಇಂದು ಒಂದೇ ದಿನ ರಾಜ್ಯದಲ್ಲಿ 143 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ.
ಇದುವರೆಗೆ ರಾಜ್ಯದಲ್ಲಿ ಮೃತರ ಸಂಖ್ಯೆ ‌ 14,426ಕ್ಕೆ ಏರಿಕೆಯಾಗಿದೆ ಅಂಕಿ ಅಂಶ ತಿಳಿಸಿದೆ.
ಸಿಟಿ ಬೆಂಗಳೂರಿನಲ್ಲಿ ಸೋಂಕಿನ ಮಹಾ ಸ್ಪೋಟ ಸಂಭವಿಸಿದೆ ಇಂದು ಒಂದೇ ದಿನ ನಗರದಲ್ಲಿ 20,733 ಹೊಸ ಸೋಂಕು‌‌ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 77 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ನಗರದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,39,201 ಹೆಚ್ಚಳವಾಗಿದ್ದು, ರಾಜ್ಯದಲ್ಲಿ 6982 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ರಾಜ್ಯಿ ಒಟ್ಟು 10,62,594 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.ರಾಜ್ಯದಲ್ಲಿ 2,62,162 ಸಕ್ರಿಯ ಪ್ರಕರಣಗಳಿದ್ದು, 1492 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆ ಜಿಲ್ಲೆಗಳಲ್ಲೂ ಸೋಂಕಿನ ಅಬ್ಬರ ಕಾಣಿಸಿಕೊಂಡಿದ್ದು ಜನರನ್ನು ಆತಂಕಕ್ಕೆ ದೂಡಿದೆ.
ಬಾಗಲಕೋಟೆ 390, ಬಳ್ಳಾರಿ 732, ಬೆಳಗಾವಿ 336, ಬೆಂಗಳೂರು ಗ್ರಾಮಾಂತರ 864, ಬೆಂಗಳೂರು ನಗರ 20,733, ಬೀದರ್ 406, ಚಾಮರಾಜನಗರ 284, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 247, ಚಿತ್ರದುರ್ಗ 100, ದಕ್ಷಿಣ ಕನ್ನಡ 564, ದಾವಣಗೆರೆ 242, ಧಾರವಾಡ 546, ಗದಗ 76, ಹಾಸನ 768, ಹಾವೇರಿ 99, ಕಲಬುರಗಿ 626, ಕೊಡಗು 1,077, ಕೋಲಾರ 782, ಕೊಪ್ಪಳ 152, ಮಂಡ್ಯ 814, ಮೈಸೂರು 700, ರಾಯಚೂರು 643, ರಾಮನಗರ 225, ಶಿವಮೊಗ್ಗ 418, ತುಮಕೂರು 1,153, ಉಡುಪಿ 319, ಉತ್ತರ ಕನ್ನಡ 243, ವಿಜಯಪುರ 468 ಮತ್ತು ಯಾದಗಿರಿಯಲ್ಲಿ 363 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.