ಸೋಂಕುತುಸು ಇಳಿಕೆ

ನವದೆಹಲಿ,ಸೆ.೧೭- ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ನಿತ್ಯ ಏರಿಳಿತವಾಗುತ್ತಿದೆ. ಕಳೆದ ಎರಡು ದಿನಗಳಿಂದ ೬ ಸಾವಿರ ಗಡಿ ದಾಟಿದ್ದ ಸೋಂಕು ಸಂಖ್ಯೆ ಇಂದು ತುಸು ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೫,೭೪೭ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ೫,೬೧೮ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.
ನಿತ್ಯ ಸೋಂಕು ಸಂಖ್ಯೆ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ದಿನದ ಪಾಸಿಟಿವಿಟಿ ಪ್ರಮಾಣ ಶೇ.೧.೬೯ಕ್ಕೆ ಕುಸಿದಿದ್ದು ವಾರದ ಸರಾಸರಿ ಪ್ರಮಾಣ ಶೇ. ೧.೭೪ ರಷ್ಟು ಇದೆ ಅಲ್ಲದೆ ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ.೦.೧೧ಕ್ಕೆ ಏರಿಕೆಯಾಗಿದೆ.
ಸೋಂಕು ಸಂಖ್ಯೆ ಏರಿಳಿತ ಹಿನ್ನೆಲೆಯಲ್ಲಿ ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೪೬,೮೪೮ ಮಂದಿಂiiಲ್ಲಿ ಇದೆ. ಹೊಸದಾಗಿ ಚೇತರಿಸಿಕೊಂಡ ಸಂಖ್ಯೆ ಸೇರಿದಂತೆ ಇಲ್ಲಿಯವರೆಗೂ ೪,೩೯,೫೩,೩೭೪ ಸೋಂಕಿತರು ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ೫,೨೮,೩೦೨ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಹೊಸದಾಗಿ ೨೩,೯೨,೫೩೦ ಡೋಸ್ ಲಸಿಕೆ ನೀಡಲಾಗಿದ್ದು ಇಲ್ಲಿಯವರೆಗೆ ೨೧೬,೪೧,೭೦,೫೫೦ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ ಹೊಸದಾಗಿ ೩,೪೦,೨೧೧ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದ್ದು ಇಲ್ಲಿಯವರೆಗೆ ೮೯.೧೨ ಕೋಟಿ ಜನರಿಗೆ ಸೋಮಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.
ಸೋಂಕಿನ ನಿತ್ಯ ಏರಿಳಿತ ಹಿನ್ನೆಲೆಯಲ್ಲಿ ಚೇತರಿಕೆ ಒಟ್ಟು ಸಂಖ್ಯೆ ಶೇ.೯೮.೭೧ ರಷ್ಟು ಇದೆ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.