ಸೋಂಕು ಏರಿಕೆ : ಮೋದಿ ರಾಜೀನಾಮೆಗೆ ಹೆಚ್ಚಿದ ಒತ್ತಡ

ನವದೆಹಲಿ, ಮೇ.೨- ದೇಶದಲ್ಲಿ ಕೊರೋನೋ ಸೋಂಕು ಕಾಣಿಸಿಕೊಂಡ ನಂತರ ಕಾಲ ಬದಲಾಗಿದೆ. ದೇಶದಲ್ಲಿದೆ ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಆಗ್ರಹ ಕೇಳಿಬಂದಿದೆ

ಪ್ರಧಾನಿ ನರೇಂದ್ರ ಮೋದಿ ,ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಮತ್ತಿತರರು ಅಧಿಕಾರದಿಂದ ನಿರ್ಗಮಿಸಬೇಕು ಎನ್ನುವ ಸಾರ್ವತ್ರಿಕ ಅಭಿಪ್ರಾಯಗಳು ದೇಶದೆಲ್ಲೆಡೆ ಕೇಳಿಬರುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸ್ವಯಂ ಕೇಂದ್ರೀಕೃತ ಆಡಳಿತ ವ್ಯವಸ್ಥೆ ದೇಶದಿಂದ ದೂರವಾಗಬೇಕು ಇದೊಂದು ಜನ ವಿರೋಧಿ ಸರ್ಕಾರ ಎನ್ನುವ ಸಾರ್ವತ್ರಿಕ ಅಭಿಪ್ರಾಯಗಳು ದೇಶದಲ್ಲೆಡೆ ಕೇಳಿಬರುತ್ತಿವೆ.

ಅಚ್ಚರಿಯ ಬೆಳವಣಿಗೆ ಎಂದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿದ್ದ ಜನರೇ ಈಗ ಅವರ ವಿರುದ್ಧ ತಿರುಗಿ ಬಿದ್ದಿರುವ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶಕ್ಕೆ ಕಾರಣವಾಗಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿರುವ ಪರಿಸ್ಥಿತಿಯನ್ನು ನಿರ್ವಹಿಸಲು ಸಂಪೂರ್ಣವಾಗಿ ವಿಫಲವಾಗಿದ್ದಾರೆ .ಸೋಂಕು ಹೆಚ್ಚಳವಾಗಿದ್ದರೂ ದೇಶದಲ್ಲಿ ಚುನಾವಣೆಯನ್ನು ಘೋಷಣೆ ಮಾಡಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಪ್ರತಿವರ್ಷ ಒಂದಿಲ್ಲೊಂದು ಸಮಸ್ಯೆಯನ್ನು ಜನರು ಸಾರ್ವತ್ರಿಕವಾಗಿ ಎದುರಿಸುತ್ತಿದ್ದಾರೆ ಇದರಿಂದ ಇಡೀ ದೇಶ ಸಮಸ್ಯೆಗೆ ಸಿಲುಕುವಂತಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.

ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದರೂ ಆರೋಗ್ಯಕ್ಷೇತ್ರಕ್ಕೆ ಗಮನ ಹರಿಸುವುದನ್ನು ಬಿಟ್ಟು ೨೦,೦೦೦ ಕೋಟಿ ವೆಚ್ಚದಲ್ಲಿ ಸೆಂಟ್ರಲ್ ವಿಸ್ತಾ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮಕ್ಕೆ ಟೀಕೆ ವ್ಯಕ್ತವಾಗಿದೆ