ಸೋಂಕು ಏರಿಕೆ : ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು, ಮಾರ್ಚ್. ೨೯- ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಇಂದು ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕೆಲ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ
ಕೊರೊನಾ ಎರಡನೆಯ ತಡೆಯಲು ರಾತ್ರಿ ಕಲ ರಾತ್ರಿ ಕರ್ಫ್ಯೂ ಸೇರಿದಂತೆ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಅಗತ್ಯತೆಯನ್ನು ತಜ್ಞರ ಕೋವಿಡ್ ಸಲಹಾ ಸಮಿತಿ ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆಯೂ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಸಚಿವರುಗಳು ವಲಯ ಉಸ್ತುವಾರಿಗಳ ಸಭೆಯಲ್ಲಿ ಸಭೆಯನ್ನು ಸಂಜೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದ್ದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಂದಾಯ ಸಚಿವ ಆರ್ ಅಶೋಕ್ ವಲಯ ಉಸ್ತುವಾರಿ ಸಚಿವರುಗಳು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳುವರು.
ನೆರೆ ರಾಜ್ಯಗಳಾದ ಕೇರಳ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಡಿಭಾಗಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಂಡು ರಾಜ್ಯ ಪ್ರವೇಶಿಸುವ ಅವರ ಮೇಲೆ ನಿಗಾ ಇಡಲು ನೀಡಲು ಪೊಲೀಸರನ್ನು ನಿಗಾ ಕಾರ್ಯಕ್ಕೆ ನಿಯೋಜಿಸುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಮಹಾರಾಷ್ಟ್ರದಲ್ಲಿ ಸೋಂಕು ತಡೆಯಲು ರಾತ್ರಿ ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ಅಗತ್ಯವಿದೆಯೇ ಅಗತ್ಯವಿದೆಯೇ ಇಲ್ಲವೇ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಬೇಕೇ ಇಲ್ಲವೇ ಮುಂದುವರಿಸಬೇಕೇ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಒಂದರಿಂದ ೯ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡದೆ ಮುಂದಿನ ತರಗತಿಗೆ ಉತ್ತಿರ್ಣ ಮಾಡುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರವಾಗಲಿದೆ
ಸೋಂಕು ಹೆಚ್ಚಳ ರಾಜ್ಯದಲ್ಲಿ: ಕೆಲದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ನಿನ್ನೆ ರಾಜ್ಯದಲ್ಲಿ ಹೊಸ ಪ್ರಕರಣಗಳು ಹಲವು ದಿನಗಳ ನಂತರ ಮತ್ತೆ ಮೂರು ಸಾವಿರ ಗಡಿ ದಾಟಿದೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿದಾಟಿದೆ ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಸಭೆ ನಡೆಸಲಿದ್ದಾರೆ ಎಂದು ಆರೋಗ್ಯ ಡಾ ಕೆ ಸುಧಾಕರ್ ಹೇಳಿದ್ದಾರೆ