ಸೋಂಕು : ಚೇತರಿಕೆ – ಏರಿಕೆ

ನವದೆಹಲಿ,ಅ.೨೯- ದೇಶದಲ್ಲಿ ಏರಿಕಯಾಗಿದ್ದ ಕೊರೊನಾ ಸೋಂಕು ಇಂದು ಮತ್ತೆ ಇಳಿಕೆಯಾಗಿದ್ದು ಚೇತರಿಕೆ ಸಂಖ್ಯೆ ಹೆಚ್ಚಾಗಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ ೧,೫೭೪ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸೋಂಕಿನಿಂದ ೨,೧೬೧ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಸೋಂಕು ಏರಿಳಿತ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು ಸದ್ಯ ಈ ಸಂಖ್ಯೆ ೧೮,೮೦೨ ಮಂದಿಗೆ ಕುಸಿದಿದೆ ಎಂದು ಸಚಿವಾಲಯ ತಿಳಿಸಿದೆ.

ಹೊಸದಾಗಿ ಚೇತರಿಸಿಕೊಂಡ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯ ತನಕ ಚೇತರಸಿಕೊಂಡ ಸಂಖ್ಯೆ ೪,೪೧,೦೨,೮೫೨ ಮಂದಿಗೆ ಏರಿಕೆಯಾಗಿದೆ.ಕೊರೊನಾ ಸೋಂಕು ಏರಿಳಿತ ಹಿನ್ನೆಯಲ್ಲಿ ಒಟ್ಟು ಚೇತರಿಕೆ ಪ್ರಮಾಣ ಶೇ.೯೮.೭೭ ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೊರೊನಾ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ. ೦.೯೫ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ಶೇ.೧.೧೧ ರಷ್ಟು ಇದೆ. ಅಲ್ಲದೆ ಒಟ್ಟು ಸಕ್ರಿಯ ಪ್ರಕರಣಗಳ ಶೇಕಡಾವಾರು ಸಂಖ್ಯೆ ಶೇ.೦.೦೪ ರಷ್ಟು ಇದೆ ಎಂದು ತಿಳಿಸಿದೆ.

ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧,೭೨,೮೩೪ ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ದೇಶದಲ್ಲಿ ಇಲ್ಲಿಯವರೆಗೆ ೨೧೯.೬೨ ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಇದೇ ಅವಧಿಯಲ್ಲಿ ೧,೬೫,೯೦೧ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದ್ದು ಇಲ್ಲಿಯ ತನಕ ೯೦.೦೭ ಕೋಟಿಗೂ ಅಧಿಕ ಮಂದಿಗೆ ಸೋಂಕು ಪತ್ತೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಲಾಗಿದೆ