ಸೋಂಕು ತಡೆಗಟ್ಟುವ ದಿಸೆಯಲ್ಲಿ ಮುತುವರ್ಜಿ ವಹಿಸಿ: ನರೇಂದ್ರ

ಹನೂರು: ಜೂ.05: ಕೊರೊನಾ ಸೋಂಕು ತಡೆಗಟ್ಟುವ ದಿಸೆಯಲ್ಲಿ ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಶಾಸಕ ಆರ್.ನರೇಂದ್ರ ಸಲಹೆ ನೀಡಿದರು.
ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಟಾಸ್ಕ್‍ಪೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು.
ಕೊರೊನಾ ಸೋಂಕು ಪಟ್ಟಣದಲ್ಲಿ ಕಡಿಮೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದೆ. 4 ದಿನಗಳ ಲಾಕ್‍ಡೌನ್‍ಲ್ಲೂ ಕೂಡ ಜನತೆ ಸಾಮಾನ್ಯವಾಗಿ ಓಡಾಡುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಚೆಕ್‍ಪೋಸ್ಟ್‍ಗಳಲ್ಲಿ ಹೆಚ್ಚಿನ ನಿಗಾ ವಹಿಸಿ ಅನಗತ್ಯವಾಗಿ ಓಡಾಡುವವರನ್ನು ತಪ್ಪಿಸಬೇಕು. ಕೊವೀಡ್ ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡಲು ಕ್ರಮವಹಿಸಬೇಕು ಎಂದ ಅವರು ಕೊವೀಡ್ ಸೋಂಕಿನ ಅಂಕಿಅಂಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೊವೀಡ್ ಲಸಿಕೆ ಹಾಕಿಸಿಕೊಳ್ಳುವ ನಿಟ್ಟಿನಲ್ಲಿ ಮನವೊಲಿಸಿ:
ಹನೂರು ಭಾಗದಲ್ಲಿ ಹಾಡಿ ಹಳ್ಳಿಗಳ ಜನರುಕೊವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಲು ಹಿಂಜರಿಯುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನತೆಯ ಮನವೊಲಿಸಿ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಹೆಚ್.ನಾಗರಾಜು, ಆರೋಗ್ಯ ಇಲಾಖೆ ಉಪ ನಿರ್ದೇಶಕಡಾ.ಗಣೇಶ್, ತಾಲ್ಲೂಕು ವೈದ್ಯಾಧಿಕಾರಿಡಾ.ಪ್ರಕಾಶ್, ಎಇಇ ಸದಾನಂದ ಮೂರ್ತಿ, ಪ.ಪಂ.ಮುಖ್ಯಾಧಿಕಾರಿಇನ್ಸ್‍ಪೆಕ್ಟರ್‍ಗಳಾದ ಸಂತೋಷ್‍ಕಶ್ಯಪ್, ರಮೇಶ್, ನಂಜುಂಡಸ್ವಾಮಿಇದ್ದರು.