ಸೋಂಕು ತಡೆಗೆ ಕಠಿಣ ಕ್ರಮ

-Cn yudiurappa offerings flower on the occassion of ambderkar jayanthi infront of v.soudha

ಬೆಂಗಳೂರು, ಏ. ೧೪- ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿ ಮಾಡದೆ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇದೇ ತಿಂಗಳ ೧೮ ರಂದು ಸರ್ವ ಪಕ್ಷ ಸಭೆ ಕರೆದಿರುವುದಾಗಿ ಹೇಳಿದ್ದಾರೆ.
ಲಾಕ್‌ಡೌನ್ ಹೊರತುಪಡಿಸಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಬಿಗಿ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ವಿರೋಧ ಪಕ್ಷಗಳ ಮುಖಂಡರುಗಳ ಸಲಹೆ ಪಡೆಯುವುದಾಗಿ ಅವರು ಹೇಳಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ ೧೮ ರಂದು ಸರ್ವಪಕ್ಷಗಳ ಸಭೆ ಇದೆ. ಸಭೆಯಲ್ಲಿ ವಿಪಕ್ಷ ನಾಯಕರ ಸಲಹೆ ಪಡೆಯುವುದಾಗಿ ಹೇಳಿದರು.
ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಬಿಟ್ಟು ಉಳಿದ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ ಎಂಬ ಸ್ಪಷ್ಟ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.
ಮಹಾರಾಷ್ಟ್ರದಲ್ಲಿ ಕೈಗೊಂಡಿರುವ ಮಾದರಿಯಲ್ಲೇ ಕ್ರಮಗಳನ್ನು ಕೈಗೊಳ್ಲುತ್ತೀರಾ ಎಂಬ ಪ್ರಶ್ನೆಗೂ ಮುಖ್ಯಮಂತ್ರಿಗಳು, ಲಾಕ್‌ಡೌನ್ ಬಿಟ್ಟು ಉಳಿದ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಪ್ರತಿಪಕ್ಷಗಳ ನಾಯಕರ ಸಲಹೆ ಪಡೆದು ಮುಂದುವರೆಯುತ್ತೇನೆ ಎಂದರು.
ಕೊರೊನಾ ಸೋಂಕು ತಡೆಯಲು ರಾತ್ರಿ ಕರ್ಫ್ಯೂ ವಿಸ್ತರಣೆ ಮಾಡುವ ಅಗತ್ಯಬಿದ್ದರೆ ಅದನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.
ಕೊರೊನಾ ತಡೆಗೆ ವೀಕ್‌ಎಂಡ್ ಲಾಕ್‌ಡೌನ್ ಬಗ್ಗೆ ಯಾವುದೇ ಪ್ರಸ್ತಾವ ಇಲ್ಲ ಎಂದು ಅವರು ಹೇಳಿದರು. ಅಗತ್ಯ ಬಿದ್ದರೆ ಇನ್ನಷ್ಟು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಉಪಸ್ಥಿತರಿದ್ದರು.
ಲಾಕ್‌ಡೌನ್ ಇಲ್ಲ
ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್‌ಡೌನ್ ಮಾಡುವುದಿಲ್ಲ. ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿಪಕ್ಷಗಳ ನಾಯಕರ ಸಲಹೆ ಪಡೆದು ಇನ್ನಷ್ಟು ಕಠಿಣಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಔಷಧಿ, ಲಸಿಕೆ ಕೊರತೆ ಇಲ್ಲ. ಮುಂಬರುವ ದಿನಗಳಲ್ಲಿ ಕೊರತೆಯಾಗದ ರೀತಿಯಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಸೋಂಕು ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಸಾವಿನ ಪ್ರಮಾಣ ಕಳೆದ ವರ್ಷದಷ್ಟೇ ಇದೆ. ಈ ನಿಟ್ಟಿನಲ್ಲಿ ಲಾಕ್‌ಡೌನ್ ಹೊರತುಪಡಿಸಿ ಬಿಗಿಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಎಂ ಪ್ರವಾಸ ಮುಗಿಸಿ ವಾಪಸ್ ಬಂದ ಬಳಿಕ ಕಠಿಣ ನಿಯಮ ಜಾರಿಗೆ ತರಲಾಗುವುದು ಎಂದರು.
ಮದುವೆ ಸೇರಿದಂತೆ ಜನರು ಸೇರುವ ಸಮಾರಂಭಗಳಿಗೆ ಕಡಿವಾಣ ಹಾಕಬೇಕಾಗಿದ್ದು, ಈ ವಿಚಾರದಲ್ಲಿ ಜನರೇ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು. ಜನರೇ ಜನತಾ ಕರ್ಫ್ಯೂಗೆ ಕೈ ಜೋಡಿಸಬೇಕು.
ರಾತ್ರಿ ಕರ್ಫ್ಯೂ ಬದಲಾವಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ರಾಜ್ಯದಲ್ಲಿ ಕೊರೊನಾ ೨ನೇ ಅಲೆಯನ್ನು ತಡೆಯಲು ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೀದರ್‌ನ ಹುಮನಾಬಾದ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಇಲ್ಲದೆ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಬಿಗಿ ಕ್ರಮಗಳನ್ನು ಜಾರಿಗೊಳಿಸಲಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದರು.
ಕಳೆದ ಬಾರಿ ಕೊರೊನಾ ಬಂದಾಗ ಏನಾಗಿತ್ತು ಎಂಬುದರ ಅರಿವು ಅನುಭವ ನಮಗಿದೆ. ಅದರ ಆಧಾರದ ಮೇಲೆ ಲಾಕ್‌ಡೌನ್ ಜಾರಿಗೊಳಿಸದೆ ನಿಯಂತ್ರಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಸದ್ಯಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಹೇಳಿಕೆ ಬಗ್ಗೆ ಎದ್ದಿರುವ ಊಹಾಪೂಹಗಳಿಗೆ ಯಾರೂ ಕಿವಿಗೊಡಬಾರದು ಎಂದು ಜನತೆಯಲ್ಲಿ ಮನವಿ ಮಾಡಿದ ಅವರು, ವಾರಾಂತ್ಯದಲ್ಲಿ ಲಾಕ್‌ಡೌನ್ ಅಥವಾ ಇನ್ನಿತರ ಕಟ್ಟುನಿಟ್ಟಿನ ಕ್ರಮಗಳ ಕುರಿತು ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜನ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಸಹಕರಿಸಿದರೆ ಕೊರೊನಾ ನಿಯಂತ್ರಣ ಸಾಧ್ಯ ಎಂದು ಅವರು ಹೇಳಿದರು.

ಲಾಕ್‌ಡೌನ್ ಪ್ರಸ್ತಾವನೆ ಇಲ್ಲ